ಶುಕ್ರವಾರ, ಏಪ್ರಿಲ್ 23, 2021
31 °C

ಪರೀಕ್ಷೆ ಸಂದರ್ಭದಲ್ಲಿ ಕಾಲಾಹರಣ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಕಾಲವನ್ನು ವ್ಯರ್ಥಮಾಡದೆ ಪರಿಶ್ರಮದಿಂದ ಅಧ್ಯಯನ ಕೈಗೊಳ್ಳಬೇಕು  ಎಂದು ವಕೀಲ ರಾಜೇಶ್ ಸಲಹೆ ನೀಡಿದರು.

ಗುರುಭವನದಲ್ಲಿ ಶಿಕ್ಷಣ ಇಲಾಖೆಯ ಪರಿಶಿಷ್ಟಜಾತಿ ಮತ್ತು ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘ, ದಲಿತ ಸಂಘರ್ಷ ಸಮಿತಿ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮಾನಸಿಕ ಒತ್ತಡ ನಿವಾರಣೆ ಕಾರ್ಯಾಗಾರದಲ್ಲಿ ಮಾತನಾಡಿದರು.ಶಿಸ್ತಿನಿಂದ ಪ್ರತಿ ವಿಷಯದ ಮೇಲೂ ಗಮನಹರಿಸಬೇಕು. ಉತ್ತಮ ಅಂಕಗಳಿಕೆಯಿಂದ ಪೋಷಕರಿಗೆ ಮತ್ತು ಶಾಲೆಗೆ ಕೀರ್ತಿ ತರಲು ಸಾಧ್ಯ ಎಂದರು.

ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಮಾತನಾಡಿ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಕ್ಷೇಮಾಭಿವೃದ್ಧಿ ಸಂಘದ ಮೂಲಕ ಅನುಷ್ಠಾನಗೊಳಿಸಲು ತಾಲ್ಲೂಕಿನಲ್ಲಿ ಶೇ.50ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳನ್ನು ದತ್ತುಪಡೆಯಲಾಗಿದೆ.ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಉಪ ಪ್ರಾಂಶುಪಾಲ ಕೆ.ಬಸವರಾಜು, ಎಸ್‌ಡಿಎಂಸಿ ಅಧ್ಯಕ್ಷ ನಂಜಪ್ಪ, ಸದಸ್ಯ ವೇಣುಗೋಪಾಲ್, ಸಂಪನ್ಮೂಲ ಶಿಕ್ಷಕಿ ಶಾರದಾ ಬಾಯಿ, ಶಿಕ್ಷಕ ಲಿಂಗಪ್ಪ ಕೆಂದೂರ್, ಡಿಎಸ್‌ಎಸ್ ಉಪ ಪ್ರಧಾನ ಸಂಚಾಲಕ ತಿಮ್ಮರಾಯಪ್ಪ, ಡಿಎಸ್‌ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಮಹೇಶ್ ದಾಸ್, ವಕೀಲ ಹರೀಶ್ ಹಾಜರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಿಸಲಾಯಿತು      

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.