ಪರೋಕ್ಷ ತೆರಿಗೆ: ಪ್ರಣವ್ ವಿಶ್ವಾಸ

7

ಪರೋಕ್ಷ ತೆರಿಗೆ: ಪ್ರಣವ್ ವಿಶ್ವಾಸ

Published:
Updated:

ನವದೆಹಲಿ (ಪಿಟಿಐ): ಆರ್ಥಿಕ ಹಿಂಜರಿತದ ನಡುವೆಯೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಅಂದಾಜಿಸಲಾಗಿರುವ ್ಙ3.92 ಲಕ್ಷ ಕೋಟಿ ಪರೋಕ್ಷ ತೆರಿಗೆ ಸಂಗ್ರಹದ ಗುರಿ ತಲುಪುವ ವಿಶ್ವಾಸ ಇದೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.ಬುಧವಾರ ಇಲ್ಲಿ ಕೇಂದ್ರ ಅಬಕಾರಿ ಮತ್ತು ಸೀಮಾ ಸುಂಕ ಅಧಿಕಾರಿಗಳಿಗೆ ರಾಷ್ಟ್ರಪತಿ ಪುರಸ್ಕಾರ ಪ್ರಧಾನ ಮಾಡಿ, ಅವರು ಮಾತನಾಡಿದರು. ಕೇಂದ್ರ ಅಬಕಾರಿ ಮತ್ತು ಸೀಮಾಸುಂಕ ಮಂಡಳಿಯು ನೇರ ತೆರಿಗೆ ಸಂಗ್ರಹದ ಗುರಿ ತಲುಪಲು ಅವಿರತವಾಗಿ ಶ್ರಮಿಸುತ್ತಿದ್ದು, ಈಗಾಗಲೇ ಶೇ 80ರಷ್ಟು ಪ್ರಗತಿ ದಾಖಲಿಸಲಾಗಿದೆ ಎಂದರು.ಪ್ರಸಕ್ತ ಹಣಕಾಸು ವರ್ಷದ ಜನವರಿ ತಿಂಗಳ ವರೆಗೆ ಪರೋಕ್ಷ ತೆರಿಗೆ ಮೂಲಕ ಒಟ್ಟು ್ಙ3.17 ಲಕ್ಷ ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ  ಇದು ್ಙ2.75 ಲಕ್ಷ ಕೋಟಿಗಳಷ್ಟಿತ್ತು. ದೇಶದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೆ ಹಿಂದಿನ ವರ್ಷದ ಶೇ 8.4ರಿಂದ ಶೇ 6.9ಕ್ಕೆ ಕುಸಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry