ಗುರುವಾರ , ಮೇ 13, 2021
18 °C

ಪರ್ಯಾಯ ಎಡ ಪ್ರಜಾತಾಂತ್ರಿಕ ರಚನೆಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಯಿಕ್ಕೋಡ್ (ಪಿಟಿಐ): ಕಾಂಗ್ರೆಸ್ ಮತ್ತು ಬಿಜೆಪಿ ನವ ಉದಾರ ನೀತಿಗಳಿಗೆ ಪ್ರೇರಣೆ ನೀಡುವ ಮೂಲಕ ದೇಶದ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿರುವ ಸಿಪಿಎಂ, ಈ ಎರಡೂ ಪಕ್ಷಗಳಿಗೆ ಪರ್ಯಾಯವಾಗಿ ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಒಗ್ಗೂಡಬೇಕು ಎಂದು ಕರೆ ನೀಡಿದೆ.`ದೇಶ ಮತ್ತು ಜನತೆ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪರ್ಯಾಯ ಶಕ್ತಿಗಳು ಒಗ್ಗೂಡುವುದು ಇಂದು ಹೆಚ್ಚು ಪ್ರಸ್ತುತವಾಗಿದೆ~ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಪ್ರತಿಪಾದಿಸಿದ್ದಾರೆ.ಇಲ್ಲಿ ಬುಧವಾರ ಆರಂಭವಾದ ಸಿಪಿಎಂ 20ನೇ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, `ದೇಶದ ಜನತೆ ಪರ್ಯಾಯ ಶಕ್ತಿಯತ್ತ ಎದುರು ನೋಡುತ್ತಿದ್ದಾರೆ. ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳಿಂದ ಮಾತ್ರ ಪರ್ಯಾಯ ಕಲ್ಪಿಸಲು ಸಾಧ್ಯ~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.