ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ

7

ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ

Published:
Updated:

ಯಾದಗಿರಿ: ಮಕ್ಕಳ ಅಂಗವೈಕಲ್ಯ ತಪ್ಪಿಸಲು ಐದು ವರ್ಷದೊಳಗಿನ ಮಕ್ಕಳಿಗೆ ಪಾಲಕರು ತಪ್ಪದೇ ಪೋಲಿಯೊ ಹನಿ ಹಾಕಿಸಬೇಕು ಎಂದು ಶಾಸಕ ಡಾ. ಎ.ಬಿ. ಮಾಲಕರೆಡ್ಡಿ ಹೇಳಿದರು. ಕೋಲಿವಾಡಾ ಶಾಲೆಯಲ್ಲಿ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ದೇಶದಲ್ಲಿ ಪೋಲಿಯೊ ನಿರ್ಮೂಲನೆಗಾಗಿ ಈ ಅಭಿಯಾನವನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ದೃಷ್ಟಿಯಿಂದ ಪೋಲಿಯೊ ಹನಿ ಹಾಕಿಸುವುದು ಅತ್ಯಂತ ಅವಶ್ಯಕ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಮಾತನಾಡಿ, ಮಕ್ಕಳನ್ನು ಹೆಚ್ಚಿನ ಜನಸಂಖ್ಯೆಯಲ್ಲಿ ಬೂತ್‌ಗಳಿಗೆ ತಂದು ಲಸಿಕೆ ಹಾಕಿಸಬೇಕು ಎಂದು ಹೇಳಿದರು.ನಗರಸಭೆ ಅಧ್ಯಕ್ಷೆ  ಲಲಿತಾ ಅನಪೂರ, ತಹಸೀಲ್ದಾರ ಖಾಜಿ ನಫೀಜಾ ಮುತಾಲಿಬ್, ಡಾ. ಅಭಯ ಕುಮಾರ, ಆರೋಗ್ಯ ಶಿಕ್ಷಣಾಧಿಕಾರಿ ಸಿದ್ರಾಮ ಹೊನ್ಕಲ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ವಂದನಾ ಗಾಳಿ, ನಗರಸಭೆ ಸದಸ್ಯೆ ಸುಮಿತ್ರಾ ರಾಜಶೇಖರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ರಘುನಾಥರೆಡ್ಡಿ ಪಾಟೀಲ, ಕಾರ್ಯದರ್ಶಿ ಆನಂದ ಮಿಲ್ಟ್ರಿ, ದೇವೆಂದ್ರಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲೆಯ ಮಕ್ಕಳು, ಸಿಬ್ಬಂದಿ ಭಾಗವಹಿಸಿದ್ದರು.ರೋಟರಿ ಕ್ಲಬ್: ಪೋಲಿಯೊ ನಿರ್ಮೂಲನೆ ಅಭಿಯಾನದಲ್ಲಿ ರೋಟರಿ ಕ್ಲಬ್ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿದೆ ಎಂದು ಯಾದಗಿರಿ ರೋಟರಿ ಕ್ಲಬ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸಂಜಯ ರಾಯಚೂರಕರ ಹೇಳಿದರು.ನಗರದ ಕೇಂದ್ರಿಯ ಗಣಿ ಮತ್ತು ಬೀಡಿ ಕಾರ್ಮಿಕ ಕಲ್ಯಾಣ ಸಂಸ್ಥೆ ಆಸ್ಪತ್ರೆಯಲ್ಲಿ ಭಾನುವಾರ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಉಪಾಧ್ಯಕ್ಷ ಸಿದ್ಧಲಿಂಗರೆಡ್ಡಿ ಉಳ್ಳೆಸೂಗುರ, ಬಸವರಾಜ, ಕೆಪಿಸಿಸಿ ಸದಸ್ಯ ಮೌಲಾಲಿ ಅನಪೂರ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುಭಾಷ ಕರಣಗಿ, ರೋಟರಿ ಕ್ಲಬ್ ಸದಸ್ಯರಾದ ಶಶಿಕಾಂತ ಕಶೆಟ್ಟಿ, ವಿರೂಪಾಕ್ಷ ಎಕ್ಕಳ್ಳಿ, ರಹಿಮ್ ಸಗರಿ, ಆಸ್ಪತ್ರೆ ಸಿಬ್ಬಂದಿಗಳಾದ ವೆಂಕಟೇಶ ಜಕಾತಿ, ಸುಧಾ, ಸಾಕಮ್ಮ, ಶಂಕರ ಕಾಳಗಿ, ಯಲ್ಲಾರಲಿಂಗ, ಉಮಾಪತಿ, ಸರಿತಾ, ರುಕ್ಮಿಣಿಯಮ್ಮ, ಪಾಲಕರು, ಮಕ್ಕಳು ಹಾಜರಿದ್ದರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry