ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

7

ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

Published:
Updated:

ಮಾನ್ವಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭಾನುವಾರ ರಾಷ್ಟ್ರೀಯ ಕಾರ್ಯಕ್ರವಾದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಪಟ್ಟಣದ ಸೋನಿಯಾ ಗಾಂಧಿ  ನಗರದ ಅಂಗನವಾಡಿ ಕೇಂದ್ರದಲ್ಲಿ ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ಶರಣಪ್ಪ ಬಲ್ಲಟಗಿ, ತಾಲ್ಲೂಕಿನಲ್ಲಿ ಒಟ್ಟು 53,094 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕುರಿ ಹೊಂದಲಾಗಿದೆ. ಪಟ್ಟಣದ 26 ಸೇರಿದಂತೆ ತಾಲ್ಲೂಕಿನಾದ್ಯಾಂತ ಒಟ್ಟು 221 ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ.ಭಾನುವಾರ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುವುದು. ಸೋಮವಾರದಿಂದ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಒಟ್ಟು 472 ಸಿಬ್ಬಂದಿ ನೇಮಿಸಲಾಗಿದೆ.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.ಪುರಸಭೆ ಮಾಜಿ ಉಪಾಧ್ಯಕ್ಷ ರಾಮಕೃಷ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಹಿರೇಮಠ, ಡಾ.ವಿಜಯಶಂಕರ ಮತ್ತಿತರರು ಇದ್ದರು.ಪುರಸಭೆ: ಸ್ಥಳೀಯ ಪುರಸಭೆ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಾ ವೆಂಕಟಪ್ಪ ನಾಯಕ ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ, ಜೆಡಿಎಸ್ ಮುಖಂಡ ಮೌಲಾಸಾಬ್ ಮತ್ತಿತರರು ಇದ್ದರು.ಮದ್ಲಾಪುರ: ತಾಲ್ಲೂಕಿನ ಮದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಹನುಮೇಶ ಮದ್ಲಾಪುರ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಗುರು ಯೂಸೂಫ್, ಗ್ರಾಮ ಪಂಚಾಯಿತಿ ಸದಸ್ಯ ಸತ್ತಾರ್ ಸಾಬ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.ಪೋತ್ನಾಳ: ತಾಲ್ಲೂಕಿನ ಪೋತ್ನಾಳ ಗ್ರಾಮದ ಪಂಚಾಯಿತಿ ಬೂತ್‌ನಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ವಿಶ್ವನಾಥ ಪಾಟೀಲ್ ತೋರಣದಿನ್ನಿ, ಗ್ರಾಮ ಪಂಚಾಯಿತಿ ಸದಸ್ಯ ಎಚ್.ಶರ್ಪುದ್ದೀನ್ ಪೋತ್ನಾಳ, ವೈದ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಸ್ವಾಮಿ ಮತ್ತಿತರರು ಇದ್ದರು.ಚಾಗಬಾವಿ: ಚಾಗಬಾವಿ ಗ್ರಾಮದ ಪಂಚಾಯಿತಿ ಬೂತ್‌ನಲ್ಲಿ ಹಿರಿಯ ಶಿಕ್ಷಕ ಮಲ್ಲಪ್ಪ ಪೋಲಿಯೋ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ವಿಕಲ ಚೇತನರ ಸಂಘದ ಅಧ್ಯಕ್ಷ ತಿಮ್ಮಣ್ಣ ನಾಯಕ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಹಾಲ್ವಿ, ಇಂದುಮತಿ ಪಲ್ಲೇದ, ಅಂಗನವಾಡಿ ಕಾರ್ಯಕರ್ತೆ ವಿದ್ಯಾಶ್ರೀ, ಅಂಬಣ್ಣ ಶೆಟ್ಟಿ ಮತ್ತಿತರರು ಇದ್ದರು.ಕಾತರಕಿ: ಕಾತರಕಿ ಗ್ರಾಮದ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಪಾರ್ವತಮ್ಮ ಮಗುವಿಗೆ ಲಸಿಕೆ ಹಾಕುವ ಮೂಲಕ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಿರಿಯ ಆರೋಗ್ಯ ಸಹಾಯಕಿ ಶಕುಂತಲಾ, ಶಿಕ್ಷಕರಾದ ಹುಸೇನಪ್ಪ, ಸಿದ್ದಲಿಂಗಪ್ಪ ಕವಿತಾ ಪಟೆಗಾರ್, ಸುಜಾತ, ರೂಪಾ ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry