ಪಶುವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಷರತ್ತುಬದ್ಧ ಒಪ್ಪಿಗೆ

7

ಪಶುವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಷರತ್ತುಬದ್ಧ ಒಪ್ಪಿಗೆ

Published:
Updated:

ಬೆಂಗಳೂರು: ರಾಜ್ಯದ ಬೀದರ್‌, ಶಿವಮೊಗ್ಗ ಮತ್ತು ಹಾಸನ ಪಶು­ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಭಾರತೀಯ ಪಶು­ವೈದ್ಯಕೀಯ ಪರಿಷತ್‌ ಮತ್ತು ಕೇಂದ್ರ ಸರ್ಕಾರ ಷರತ್ತುಬದ್ಧ ಒಪ್ಪಿಗೆ ನೀಡಿವೆ.2014–15ನೇ ಸಾಲಿನ ಪ್ರವೇಶಾವಕಾಶಕ್ಕೆ ಮೊದಲು ಅಂದರೆ 2014ರ ಜೂನ್‌ 30ರ ಒಳಗೆ ಈ ಕಾಲೇಜುಗಳಲ್ಲಿ ಅಗತ್ಯವಿರುವ ಮೂಲಸೌಲಭ್ಯಗಳನ್ನು ಒದಗಿಸುವ ಷರತ್ತಿನೊಂದಿಗೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದಾಗಿ ಈ ವರ್ಷದ ಆರಂಭದಿಂದ ನೆನೆಗುದಿಗೆ ಬಿದ್ದಿದ್ದ ವಿಷಯ ತಾತ್ಕಾಲಿಕವಾಗಿ ಇತ್ಯರ್ಥವಾಗಿದೆ.ಒಂದು ವೇಳೆ ಕೊರತೆಗಳನ್ನು ನೀಗಿಸದಿದ್ದರೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿ­ಗಳನ್ನು ಸಮೀಪದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪ್ರವೇಶ ಕಲ್ಪಿಸುವ ಜವಾಬ್ದಾರಿಯನ್ನು ಆಯಾ ವಿ.ವಿ.ಗಳು ಮತ್ತು ರಾಜ್ಯ ಸರ್ಕಾರವೇ ತೆಗೆದು­ಕೊಳ್ಳಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry