ಹೊಸಕೋಟೆ: ತಾಲ್ಲೂಕಿನ ಹಸಿಗಾಳ ಗ್ರಾಮದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುವ ಪಶು ಚಿಕಿತ್ಸಾಲಯ ಕಟ್ಟಡಕ್ಕೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕ ಬಿ.ಎನ್.ಗೋಪಾಲಗೌಡ ಶಂಕುಸ್ಥಾಪನೆ ಮಾಡಿದರು.

ಇಲ್ಲಿಯ ಚಿಕಿತ್ಸಾಲಯವನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದಾಗಿ ಉತ್ತಮ ಚಿಕಿತ್ಸೆ ಸಿಗಲಿದೆ ಎಂದು ಅವರು ಹೇಳಿದರು.

ಸೂಲಿಬೆಲೆ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ.ಸತೀಶ್ಗೌಡ, ಗ್ರಾ.ಪಂ. ಅಧ್ಯಕ್ಷ ಮುನಿವೆಂಕಟಪ್ಪ, ತಾ.ಪಂ. ಸದಸ್ಯೆ ಮಂಜುಳ, ಸಹಾಯಕ ನಿರ್ದೇಶಕ ಡಾ.ಕೃಷ್ಣಮೂರ್ತಿರಾವ್, ಪಶು ವೈದ್ಯಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಶಿಬಿರ: ಹೊಸಕೋಟೆ ಪಟ್ಟಣದ ತಮಡ್ಮೇಗೌಡ ಬಡಾವಣೆಯಲ್ಲಿರುವ ಶ್ರೀನಿವಾಸ ಆಸ್ಪತ್ರೆಯಲ್ಲಿ ಇದೇ 19 ರಂದು ತಜ್ಞ ವೈದ್ಯರಿಂದ ಉಚಿತ ಮೂಳೆ (ಬಿಎಂಡಿ) ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯ ಬಹುದು ಎಂದು ಪ್ರಕಟಣೆ ತಿಳಿಸಿದೆ.

ಆರೋಪ: ತಾಲ್ಲೂಕಿನ ಅಂಗವಿಕಲರು ಸರ್ಕಾರದ ಸವಲತ್ತು ಸದುಪಯೋಗ ಪಡಿಸಿಕೊಳ್ಳಲು ಬೇಕಾದ ಅಂಗವಿಕಲತೆ ಪ್ರಮಾಣ ಪತ್ರ ಪಡೆಯಲು ಪರದಾಡಬೇಕಿದೆ ಎಂದು ತಾಲ್ಲೂಕು ರೈತ ಸಂಘದ ಹಸಿರು ಸೇನೆ ಆರೋಪಿಸಿದೆ. ಸಂಬಂಧಿಸಿದ ಇಲಾಖೆಗಳಲ್ಲಿ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದಕ್ಕೆ ಕಾರಣವಾಗಿದೆ. ತಾಲ್ಲೂಕು ದಂಡಾಧಿಕಾರಿಗಳು ಇತ್ತ ಗಮನ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ.

ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸೇನೆಯ ಅಧ್ಯಕ್ಷ ಎಂ.ಕೆಂಚೇಗೌಡ, ಪ್ರಧಾನ ಕಾರ್ಯದರ್ಶಿ ಅಂಕಣ್ಣಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.