ಪಶು ವಿವಿ: ವಿಸ್ತರಣೆ ಚಟುವಟಿಕೆಗೆ ಆದ್ಯತೆ
ಯಲಹಂಕ: `ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ರೈತರಿಗೆ ಉಪಯೋಗವಾಗುವಂತಹ ಸಂಶೋಧನೆ ಹಾಗೂ ವಿಸ್ತರಣೆ ಚಟುವಟಿಕೆಗೆ ಮೊದಲ ಆದ್ಯತೆ ನೀಡಲಾಗುವುದು~ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ಬೀದರ್) ಕುಲಪತಿ ಡಾ.ರೇಣುಕಾ ಪ್ರಸಾದ್ ತಿಳಿಸಿದರು.
ವಿಶ್ವವಿದ್ಯಾಲಯದ ಎಸ್ಸಿ-ಎಸ್ಟಿ ಬೋಧಕೇತರ ನೌಕರರ ಸಂಘದ ವತಿಯಿಂದ ಹೆಬ್ಬಾಳದ ಹೈನು ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
`ಪಶುವೈದ್ಯಕೀಯ, ಹೈನು ವಿಜ್ಞಾನ ಹಾಗೂ ಮೀನುಗಾರರಿಗೆ ವಿಜ್ಞಾನಗಳ ಬಗ್ಗೆ ವಿದೇಶದಲ್ಲಿ ಉಪನ್ಯಾಸ ನೀಡಲು, ಸಂಶೋಧನೆಗಳನ್ನು ಮಂಡಿಸಲು ಹಾಗೂ ಇತರ ವಿಶ್ವವಿದ್ಯಾಲಯಗಳೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು~ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಸಂಘದ ಅಧ್ಯಕ್ಷ ಎಂ.ಆನಂದಕುಮಾರ್ ಮಾತನಾಡಿ, `ಸಂಘಕ್ಕೆ ಮಾನ್ಯತೆ ನೀಡುವುದರ ಜೊತೆಗೆ ಕಾನೂನಿನ ಚೌಕಟ್ಟಿನಲ್ಲಿ ಬರುವ ಎಲ್ಲ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಇದನ್ನು ಕಾರ್ಯರೂಪಕ್ಕೆ ತರಲು ನೂತನವಾಗಿ ನೇಮಕವಾಗಿರುವ ಬೀದರ್ನ ಪಶು ವೈದ್ಯಕೀಯ ವಿವಿಕುಲಪತಿಗಳು ಹೆಚ್ಚಿನ ಕಾಳಜಿ ವಹಿಸಬೇಕು~ ಎಂದು ಅವರು ಒತ್ತಾಯಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.