ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ; 6 ಸಾವು

7

ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ; 6 ಸಾವು

Published:
Updated:
ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ; 6 ಸಾವು

ಇಸ್ಲಾಮಬಾದ್ (ಐಎನ್ಎಸ್): ಉಗ್ರರ ಅಟ್ಟಹಾಸಕ್ಕೆ ಪಾಕಿಸ್ತಾನದಲ್ಲಿ 6 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯವಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ತಿಳಿಸಿವೆ.ಪೇಶಾವರದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಘಟನೆಯಲ್ಲಿ ಉಗ್ರರು ಬಾಂಬ್ ಸ್ಪೋಟಕ್ಕೆ ಕಾರೊಂದುನ್ನು ಬಳಸಿದ್ದಾರೆ. ರಿಮೋಟ್ ಕಂಟ್ರೋಲ್ ಮೂಲಕ ಬಾಂಬ್ ಸಿಡಿಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಒಬ್ಬ ಮಹಿಳೆಯು ಸೇರಿದಂತೆ ಮಕ್ಕಳು ಸಹ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕೆತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಂಬ್ ಸ್ಫೋಟದಿಂದ ಹತ್ತಿರದ ಕಟ್ಟಡಗಳಿಗೆ ಹಾನಿಯಾಗಿದೆ. ಘಟನೆಯನ್ನು ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಆಲಿ ಜರ್ದಾರಿ ತೀವ್ರವಾಗಿ ಖಂಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry