ಪಾಕಿಸ್ತಾನದ ಮೇಲುಗೈ

7

ಪಾಕಿಸ್ತಾನದ ಮೇಲುಗೈ

Published:
Updated:

ದುಬೈ (ಪಿಟಿಐ): ಯೂನಿಸ್ ಖಾನ್ (ಬ್ಯಾಟಿಂಗ್ 115) ಅವರ ಆಕರ್ಷಕ ಶತಕದ ನೆರವಿನಿಂದ ಪಾಕಿಸ್ತಾನ ತಂಡದವರು ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ.ಪಾಕಿಸ್ತಾನ ತಂಡವು ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ತನ್ನ ದ್ವಿತೀಯ ಇನಿಂಗ್ಸ್‌ನಲ್ಲಿ 82 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿದೆ. ಇದಕ್ಕೂ ಮೊದಲು ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 55 ಓವರ್‌ಗಳಲ್ಲಿ ಕೇವಲ 141 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಈ ಮೂಲಕ  42 ರನ್‌ಗಳ ಮುನ್ನಡೆ ಪಡೆದಿತ್ತು.ಸಂಕ್ಷಿಪ್ತ ಸ್ಕೋರ್: ಪಾಕಿಸ್ತಾನ ಮೊದಲ ಇನಿಂಗ್ಸ್: 44.1 ಓವರ್‌ಗಳಲ್ಲಿ 99 ಹಾಗೂ 82 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 222 (ಅಜರ್ ಅಲಿ ಬ್ಯಾಟಿಂಗ್ 75, ಯೂನಿಸ್ ಖಾನ್ ಬ್ಯಾಟಿಂಗ್ 115; ಜೇಮ್ಸ ಆ್ಯಂಡರ್ಸನ್ 24ಕ್ಕೆ1); ಇಂಗ್ಲೆಂಡ್ ಮೊದಲ ಇನಿಂಗ್ಸ್: 55 ಓವರ್‌ಗಳಲ್ಲಿ 141

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry