ಶನಿವಾರ, ಮೇ 15, 2021
24 °C

ಪಾಕ್:ಚೀನಿ ಭಾಷೆ ಗೊಂದಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶಾಲೆಗಳಲ್ಲಿ ಚೀನಿ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಈ ಆದೇಶ ಇಲ್ಲಿನ ಶಾಲೆಗಳಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.`ಇತರೆ ಭಾಷೆಗಳಿಗೆ ಹೋಲಿಸಿದರೆ ಚೀನಿ ಭಾಷೆ ಕಲಿಯುವುದು ಕಠಿಣ~ ಎಂದು ಪತ್ರಿಕೆಯ ಸಂಪಾದಕೀಯದಲ್ಲಿ ಬರೆಯಲಾಗಿದೆ.  ಚೀನಿ ಭಾಷೆ ಮನೆಯಲ್ಲಿ ಕಲಿತುಕೊಂಡರೆ ಸ್ಪಷ್ಟವಾಗಿ ಉಚ್ಛಾರಣೆ ಮಾಡಲು ಸಾಧ್ಯವಾಗುವುದಿಲ್ಲ. ಇದನ್ನು ಕಲಿಯಬೇಕಾದರೆ ಕನಿಷ್ಠ18 ತಿಂಗಳ ಕಠಿಣ ಪರಿಶ್ರಮ ಅಗತ್ಯ ಎಂದು ಅದು ಉಲ್ಲೇಖಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.