ಶುಕ್ರವಾರ, ಏಪ್ರಿಲ್ 16, 2021
28 °C

ಪಾಕ್‌ಗೆ ಬಂಧಿತ ಸೈನಿಕನ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮ್ಮು (ಐಎಎನ್‌ಎಸ್): ಪಾಕಿಸ್ತಾನ ಮತ್ತು ಭಾರತದ ನಡುವಿನ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ಉಲ್ಲಂಘಿಸಿ ಭಾರತದೊಳಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕ್ ಸೈನಿಕನನ್ನು ತನಿಖೆ ನಡೆಸಿ ಶುಕ್ರವಾರ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ. ಗುರುವಾರ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿರುವ ನಿಯಂತ್ರಣ ಗಡಿ ರೇಖೆ ದಾಟಿ ಭಾರತದೊಳಗೆ ಅಕ್ರಮ ಪ್ರವೇಶ ಮಾಡಿದ್ದ ಸೈನಿಕನನ್ನು ಭಾರತೀಯ ಸೈನಿಕರು ಬಂಧಿಸಿದ್ದರು.ಇಲ್ಲಿಗೆ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಅಥವಾ ನೆಲೆಸಲು ಬಂದಿಲ್ಲ, ಆಕಸ್ಮಿಕವಾಗಿ ಪ್ರವೇಶಿಸಿರುವುದಾಗಿ ಆರೋಪಿಯು ತನಿಖೆ ನಡೆಸುತ್ತಿರುವ  ಸಂದರ್ಭದಲ್ಲಿ ಹೇಳಿದ್ದಾಗಿ ಸೇನಾ ಮೂಲಗಳು ತಿಳಿಸಿವೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.