ಭಾನುವಾರ, ಏಪ್ರಿಲ್ 18, 2021
33 °C

ಪಾಕ್ ಬ್ಯಾಂಕ್‌ಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್, ಭಾರತದಲ್ಲಿ ಶಾಖೆ ಆರಂಭಿಸಲು ತನ್ನ ದೇಶದ ಎರಡು ಬ್ಯಾಂಕುಗಳಿಗೆ ಅನುಮತಿ ನೀಡಿದೆ.

ಪಾಕಿಸ್ತಾನದ ನ್ಯಾಷನಲ್ ಬ್ಯಾಂಕ್ ಮತ್ತು ಯುನೈಟೆಡ್ ಬ್ಯಾಂಕ್ ಭಾರತದಲ್ಲಿ ಶಾಖೆ ಆರಂಭಿಸಲಿವೆ ಎಂದು ಪಾಕಿಸ್ತಾನ ಸ್ಟೇಟ್ ಬ್ಯಾಂಕ್(ಎಸ್‌ಬಿಪಿ) ಗವರ್ನರ್ ಯಾಸಿನ್ ಅನ್ವರ್ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿದೇಶಿ ನೇರ ಹೂಡಿಕೆ(ಎಫ್‌ಡಿಐ) ಮೂಲಕ ದೇಶದ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲು ಪಾಕಿಸ್ತಾನಕ್ಕೆ ಇತ್ತೀಚೆಗೆ ಭಾರತ ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.