ಬುಧವಾರ, ನವೆಂಬರ್ 20, 2019
23 °C

ಪಾಕ್: `ಹತ್ಫ್-4' ಕ್ಷಿಪಣಿ ಪರೀಕ್ಷೆ ಯಶಸ್ವಿ

Published:
Updated:

ಇಸ್ಲಾಮಾಬಾದ್ (ಪಿಟಿಐ): ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯವಿರುವ `ಹತ್ಫ್-4' ಖಂಡಾಂತರ ಕ್ಷಿಪಣಿ   ಪರೀಕ್ಷಾರ್ಥ ಪ್ರಯೋಗವನ್ನು ಪಾಕಿಸ್ತಾನ ಬುಧವಾರ ಯಶಸ್ವಿಯಾಗಿ ನಡೆಸಿದೆ.900 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿ ಭಾರತದಲ್ಲಿರುವ ಗುರಿಯನ್ನು ತಲುಪಬಹುದು.`ಷಾಹೀನ್-'1 ಎಂಬ ಹೆಸರಿನಿಂದಲೂ ಕರೆಯಲಾಗಿರುವ ಈ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿರುವುದು ದೇಶದ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)