ಮಂಗಳವಾರ, ನವೆಂಬರ್ 19, 2019
23 °C

ಪಾಟೀಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲೆಗೆ ಒತ್ತಾಯ

Published:
Updated:

ಬೆಳಗಾವಿ: ಮರಾಠಿಗರನ್ನು ಪ್ರಚೋದಿಸುವಂತಹ ಹೇಳಿಕೆ ನೀಡಿದ ಮಹಾರಾಷ್ಟ್ರದ ಗೃಹ ಸಚಿವ ಆರ್.ಆರ್.ಪಾಟೀಲ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಒತ್ತಾಯಿಸಿದೆ.`ಗಡಿ ವಿವಾದವು ಸುಪ್ರೀಂ ಕೋರ್ಟ್‌ನಲ್ಲಿರುವಾಗ ಆರ್. ಆರ್. ಪಾಟೀಲರು ಗಡಿ ಭಾಗದ ಮರಾಠಿಗರನ್ನು ಪ್ರಚೋದಿಸಲು ವಿವಾದಾತ್ಮಕ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಬೇಕು' ಎಂದು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.ಪಾಟೀಲ ಪ್ರತಿಕೃತಿ ದಹನ: ಕನ್ನಡಿಗರ ಮನಸ್ಸಿಗೆ ನೋವಾಗುವಂತೆ ಮಹಾರಾಷ್ಟ್ರದ ಗೃಹ ಸಚಿವ ಪಾಟೀಲ ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪಾಟೀಲರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

ಪ್ರತಿಕ್ರಿಯಿಸಿ (+)