`ಪಾರಂಪರಿಕ ವೈದ್ಯ ಪದ್ಧತಿ ಉಳಿವು ಅಗತ್ಯ'

7

`ಪಾರಂಪರಿಕ ವೈದ್ಯ ಪದ್ಧತಿ ಉಳಿವು ಅಗತ್ಯ'

Published:
Updated:

ಶಿಗ್ಗಾವಿ: `ಪಾರಂಪರಿಕ ವೈದ್ಯ ಪದ್ಧತಿಯನ್ನು ಯುವ ಜನಾಂಗ ಅರಿತುಕೊಳ್ಳಲು ಸೂಕ್ತ ತರಬೇತಿ ನೀಡುವುದು ಅಗತ್ಯ' ಎಂದು ಕುಂಕೂರಿನ ಜನಪದ ವೈದ್ಯ ಗುರುಶಾಂತಪ್ಪ ಅಭಿಪ್ರಾಯಪಟ್ಟರು.ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಡುಮನೆ ಸಭಾಂಗಣದಲ್ಲಿ ಆಯೋಜಿಸಿದ್ದ ತಿಂಗಳ ಅತಿಥಿಯೊಂದಿಗೆ ಪಟ್ಟಾಂಗ-10 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ಜನರ ಸೇವೆಯೇ ಜನಾರ್ದನ ಸೇವೆ ಎಂದು ನಂಬಿ ಈ ಕೆಲಸ ಮಾಡುತ್ತಿದ್ದು, ಇಡೀ ಕುಟುಂಬವೇ ಮೂಳೆ ಮುರಿತ ಸೇರಿದಂತೆ ಇತರೆ ಸಣ್ಣಪುಟ್ಟ ರೋಗಗಳಿಗೆ ಔಷಧಿ ಕೊಡುವ ಕಾಯಕದಲ್ಲಿ ನಿರತವಾಗಿದೆ. ಯುವ ಪೀಳಿಗೆ ಜನಪದ ವೈದ್ಯ ಪದ್ಧತಿಯನ್ನು ತಿಳಿದು ಮುಂದುವರಿಸಿಕೊಂಡು ಹೋಗುವುದು ಅವಶ್ಯ' ಎಂದರು. ನೂತನ ಕುಲಸಚಿವ ಡಾ.ಡಿ.ಬಿ.ನಾಯಕ ಮಾತನಾಡಿ, `ವ್ಯಾಪಾರೀಕರಣಗೊಳ್ಳುತ್ತಿರುವ ಇಂದಿನ ವೈದ್ಯಕೀಯ ಕ್ಷೇತ್ರದಲ್ಲಿ ಜನಪದ ವೈದ್ಯ ಪದ್ಧತಿಗಳನ್ನು ಉಳಿಸಿಕೊಳ್ಳುವುದು ಕಷ್ಟ ಸಾಧ್ಯ. ವೈದ್ಯರು ಈ ನಿಟ್ಟಿನಲ್ಲಿ ಯೋಚಿಸಿ ಎಚ್ಚರಿಕೆಯ ಹೆಜ್ಜೆಗಳನ್ನು ಇರಿಸಿದರೆ ಮಾತ್ರ ಜನಪದ ವೈದ್ಯ ಪದ್ಧತಿಗಳು ಉಳಿದುಕೊಳ್ಳಲು ಸಾಧ್ಯ' ಎಂದು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಂಬಳಿಕೆ ಹಿರಿಯಣ್ಣ, `ದೇಶೀಯ ಜ್ಞಾನಪರಂಪರೆಯನ್ನು ಸಂರಕ್ಷಿಸಿ ಸಂವರ್ಧನೆ ಮಾಡುವ ಉದ್ದೇಶದಿಂದ ವಿಶ್ವವಿದ್ಯಾಲಯ ವಿಶೇಷ ಕಾರ್ಯ ಮಾಡುತ್ತಿದೆ. ಪಾರಂಪರಿಕ ವೈದ್ಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಅಗತ್ಯತೆ ಇದೆ. ಈ ಸಂಬಂಧ ವಿಶ್ವವಿದ್ಯಾಲಯವು ಬೃಹತ್ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಿದೆ' ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಜನಪದ ವೈದ್ಯ ಗುರುಶಾಂತಪ್ಪ ಸಣ್ಣಬಸಪ್ಪ ಸವಣೂರು ಅವರನ್ನು ವಿಶ್ವವಿದ್ಯಾಲಯದ ವತಿಯಿಂದ ಸನ್ಮಾನಿಲಾಯಿತು.ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಬಿ.ಆರ್.ದೇಶಪಾಂಡೆ, ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಚಂದ್ರ ಪೂಜಾರಿ, ಹಿರಿಯ ಸಂಶೋಧನಾಧಿಕಾರಿ ಡಾ.ಕೆ.ಪ್ರೇಮಕುಮಾರ, ಕರ್ನಾಟಕ ವಿಶ್ವವಿದ್ಯಾಲಯದ ಹಾವೇರಿ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ.ಟಿ.ಎಂ.ಭಾಸ್ಕರ್, ಪ್ರಾಧ್ಯಾಪಕ  ಡಾ.ನಿಂಗಪ್ಪ ಮುದೇನೂರು, ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕ ಡಾ.ಹರಿಲಾಲ್ ಪವಾರ, ಜಾನಪದ ವಿ.ವಿ. ಸಂದರ್ಶಕ ಪ್ರಾಧ್ಯಾಪಕ ಡಾ.ಕೆ.ಕಮಲಾಕ್ಷ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.ಜಿ.ಸಣ್ಣಯ್ಯ ಪ್ರಾರ್ಥಿಸಿದರು. ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಸ.ಚಿ.ರಮೇಶ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಎಂ.ಬಿ. ಶ್ವೇತಾ ನಿರೂಪಿಸಿದರು. ಎಂಬಿಎ. ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಕಾಶ ಹೊಸಮನಿ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry