ಭಾನುವಾರ, ಮೇ 16, 2021
22 °C

ಪಾರಂಪರಿಕ ಶೈಲಿ ಬಸ್‌ನಿಲ್ದಾಣಕ್ಕೆ ಶಂಕುಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ರಾಜ್ಯ ಸಾರಿಗೆ ಸಂಸ್ಥೆಯ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ಪಾರಂಪರಿಕ ಶೈಲಿ ಬಸ್‌ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವುದು ಹೆಮ್ಮೆ ತಂದಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ ತಿಳಿಸಿದರು.ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಜೆಎಸ್‌ಡಬ್ಲ್ಯು ವಿಜಯನಗರ ಬಸ್‌ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು  ಇದಕ್ಕೆ ನೆರವಾದ ಜಿಂದಾಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.ವಿಜಯರಥಕ್ಕೆ ಚಾಲನೆ: ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ  ಎರಡು ವಿನೂತನ ಮಾದರಿ ಬಸ್‌ಗಳನ್ನು ನಿರ್ಮಿಸಲಾಗಿದ್ದು ಹಂಪಿ ಹಾಗೂ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಕೂಡಲಸಂಗಮ ಮೂಲಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.ಜಿಂದಾಲ್ ಸಂಸ್ಥೆಯ ನಿರ್ದೇಶಕ ಹಾಗೂ ಸಿಇಒ ಡಾ.ವಿನೋದ್ ನಾವೆಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಆನಂದಸಿಂಗ್ ಅಧ್ಯಕ್ಷತೆ ವಹಿಸ್ದ್ದಿದರು.  ಸಚಿವರಾದ ರಾಜುಗೌಡ, ಆನಂದ್ ಅಸ್ನೋಟಿಕರ್, ಸಂಸದೆ ಜೆ.ಶಾಂತಾ, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಹಾಜರಿದ್ದರು.ಅಪಘಾತರಹಿತ ವಾಹನ ಚಾಲನೆ ಮಾಡಿದ 386 ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಬಹುಮಾನವನ್ನು ನೀಡಿ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.