ಗುರುವಾರ , ಮೇ 13, 2021
22 °C

ಪಾರದರ್ಶಕತೆ ಅಗತ್ಯ-ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ನಿರ್ಮಾಣ ಮತ್ತು ನಿರ್ವಹಣೆಯ ಕಾಮಗಾರಿಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಂತೆ ಪ್ರಧಾನಿ ಮನಮೋಹನ ಸಿಂಗ್ ಕರೆ ನೀಡಿದ್ದಾರೆ.ಸೋಮವಾರ ಇಲ್ಲಿ ನಡೆದ `ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ನಿರ್ವಹಣೆಯಲ್ಲಿನ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ~ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆದ್ದಾರಿಗಳ ನಿರ್ಮಾಣ ಮತ್ತು ನಿರ್ವಹಣೆಯ ಗುತ್ತಿಗೆ ನೀಡಿಕೆಯಲ್ಲಿ ಮುಕ್ತ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ.ಇದರಿಂದ ಸರ್ಕಾರ ಯಾರ ಪಕ್ಷಪಾತಿಯೂ ಅಲ್ಲ ಎಂಬುದನ್ನು ದೇಶದ ಜನರಿಗೆ ಸ್ಪಷ್ಟಪಡಿಸುವ ಅಗತ್ಯವೂ ಇದೆ ಎಂದು ಅವರು ಅಭಿಪ್ರಾಯಪಟ್ಟರು.ಹೆದ್ದಾರಿ ನಿರ್ಮಾಣ ವಲಯದಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು 2012-17ರ ಪಂಚವಾರ್ಷಿಕ ಯೋಜನೆಯಲ್ಲಿ ಒಂದು ಲಕ್ಷ ಕೋಟಿ ಡಾಲರ್ ತೊಡಗಿಸಲಿದೆ ಎಂದು ಸಿಂಗ್ ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.