ಮಂಗಳವಾರ, ಮೇ 18, 2021
22 °C

ಪಾರ್ಕಿಂಗ್ ಅವ್ಯವಸ್ಥೆ: ನಾಗರಿಕರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ `ನಾಗರಿಕ ಸಮಿತಿ' ಸಭೆಯಲ್ಲಿ ಪಟ್ಟಣದ ಪಾರ್ಕಿಂಗ್ ಅವ್ಯವಸ್ಥೆ ಬಗ್ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಸ್.ಬಿ. ಪ್ರಸನ್ನ ಮಾತನಾಡಿ, ವಾಹನಗಳ ಅಸಮರ್ಪಕ ಸಂಚಾರ ವ್ಯವಸ್ಥೆಯಿಂದ ಜನರು ಬೇಸತ್ತಿದ್ದಾರೆ. ಸ್ಟೇಟ್ ಬ್ಯಾಂಕ್ ರಸ್ತೆ, ಎಂ.ಜಿ. ರಸ್ತೆ, ಸಾರ್ವಜನಿಕ ಗ್ರಂಥಾಲಯ, ತಾಲ್ಲೂಕು ಕಚೇರಿ ಮುಂಭಾಗ, ಸಿ.ಕೆ. ಸುಬ್ಬಯ್ಯ ರಸ್ತೆ, ಕ್ಲಬ್ ರಸ್ತೆಯಲ್ಲಿ ಸಂತೆ ದಿನವೂ ವಾಹನಗಳನ್ನು ಮನಬಂದತೆ ನಿಲ್ಲಿಸಲಾ ಗುತ್ತಿದೆ. ಇದರಿಂದ ಸಂಚಾರ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ. ಸುರೇಶ್ ಶೆಟ್ಟಿ ಮಾತನಾಡಿ, ಕೆಲ ಪೊಲೀಸರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಪಟ್ಟಣದಲ್ಲಿ ಪೊಲೀಸರ ಬಗ್ಗೆ ಭಯವಿಲ್ಲ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದರು.ಪಟ್ಟಣ ಪಂಚಾಯಿತಿ ಸದಸ್ಯ ಬಿ.ಎಂ. ಸುರೇಶ್ ಮಾತನಾಡಿ, ಸಂತೆಯ ದಿನ ಗೂಡ್ಸ್ ಲಾರಿ ನಿಲ್ಲಿಸದಂತೆ ಪೊಲೀಸರು ಕ್ರಮಕೈಗೊಳ್ಳಬೇಕು. ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ನಿಯಮ ಪಾಲಿಸದ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

`ಪಟ್ಟಣಕ್ಕೆ ಸಮೀಪದ ಚಂದನಮಕ್ಕಿ ಯಲ್ಲಿ ಕೋಳಿ ಜೂಜು ನಡೆಯುತ್ತಿದೆ. ಬಡ್ಡಿ ವ್ಯವಹಾರ ದಂಧೆ ಹೆಚ್ಚಾಗಿದೆ. ಪೊಲೀಸರು ಕ್ರಮಕೈಗೊಳ್ಳ ಬೇಕು' ಎಂದು ಕರ್ನಾಟಕ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷ ದೀಪಕ್ ಒತ್ತಾಯಿಸಿದರು.ಠಾಣಾಧಿಕಾರಿ ರವಿಕಿರಣ್ ಮಾತನಾಡಿ, ಪಟ್ಟಣದಲ್ಲಿ ರಾತ್ರಿ ಗಸ್ತು, ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ. ಸಾರ್ವಜ ನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಕೋರಿದರು. ಸಭೆಯಲ್ಲಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಟಿ.ಕೆ. ರಮೇಶ್, ಆಟೊ ಸಂಘದ ಹಸನಬ್ಬ, ಲಯನ್ಸ್ ಅಧ್ಯಕ್ಷ ಜೆ.ಸಿ. ಶೇಖರ್, ಜಾಮೀಯಾ ಮಸೀದಿ ಅಧ್ಯಕ್ಷ ವಜೀರ್ ಇತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.