ಮಂಗಳವಾರ, ಮೇ 18, 2021
31 °C

ಪಾರ್ಕ್ ನಿರ್ಮಾಣ: ರಸ್ತೆ ಬಿಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಸಾರ್ವಜನಿಕ ರಸ್ತೆಯನ್ನು ಪಾರ್ಕ್ ಅಭಿವೃದ್ಧಿಗೆ ಬಳಸಿಕೊಳ್ಳಲು ಮುಂದಾಗಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕ್ರಮಕ್ಕೆ ಅಂತರಸನಹಳ್ಳಿಯ ನಂದಗೋಕುಲ ಬಡಾವಣೆ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ.ಇಲ್ಲಿನ ನಾಗರಿಕರು 30-40 ವರ್ಷಗಳಿಂದ ಓಡಾಟಕ್ಕೆ ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. ನಂದಗೋಕುಲ ಬಡಾವಣೆಯ ನಿವಾಸಿಗಳಿಗೆ ಈ ರಸ್ತೆ ಬಿಟ್ಟರೆ ಬೇರೆ ಮಾರ್ಗವಿಲ್ಲ. ರಸ್ತೆ ಬಿಟ್ಟು ಪಾರ್ಕ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ, ಟೂಡಾ ಆಯುಕ್ತರು, ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಶಿವಣ್ಣ, ಸಂಸದ ಜಿ.ಎಸ್. ಬಸವರಾಜು ಅವರಿಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಮಾಜಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕ ರಸ್ತೆಯನ್ನು ಬಿಟ್ಟು  ಪಾರ್ಕ್ ನಿರ್ಮಾಣ ಮಾಡುವಂತೆ ಆದೇಶಿಸಿದ್ದರು. ಆದರೆ ಈಗ ಓಡಾಡಲು ರಸ್ತೆ ಬಿಡದೆ ಪಾರ್ಕ್ ಅಭಿವೃದ್ಧಿಪಡಿಸುವ ಪ್ರಯತ್ನ ನಡೆದಿದೆ ಎಂದು ನಂದಗೋಕುಲ ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ.1993-94ರಲ್ಲಿ ನಂದಗೋಕುಲ ಬಡವಾಣೆ ಪಶ್ಚಿಮಕ್ಕಿರುವ ರಸ್ತೆಯ ಸರ್ವೆ ನಂ.28ರಲ್ಲಿ ವಸತಿ ಉದ್ದೇಶಕ್ಕಾಗಿ 105 ನಿವೇಶನಗಳನ್ನು ಜಿಲ್ಲಾಧಿಕಾರಿ ಮಂಜೂರು ಮಾಡಿದ್ದರು. ಈ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ನಗರಭೆ ವತಿಯಿಂದ ಖಾತೆಗಳನ್ನೂ ಮಾಡಿಸಲಾಗಿದೆ. ಆದರೆ ಈಗ ರಸ್ತೆಯನ್ನು ಬಳಸಿಕೊಂಡು ಪಾರ್ಕ್ ಅಭಿವೃದ್ಧಿ ಪಡಿಸಲು ಟೂಡಾ ಮುಂದಾಗಿದೆ.ಸಾರ್ವಜನಿಕರ ಸಂಚಾರಕ್ಕೆ ರಸ್ತೆ ಬಿಡದಿದ್ದರೆ ಉಗ್ರ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಬಡಾವಣೆ ನಿವಾಸಿಗಳು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.