ಭಾನುವಾರ, ಮೇ 16, 2021
24 °C

ಪಾಲಿಕೆ ವಿರೋಧ ಪಕ್ಷದ ನಾಯಕನ ಆಯ್ಕೆ: ಹೈಕಮಾಂಡ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಡಳಿತಾರೂಢ ಬಿಜೆಪಿ ನೂತನ ಮೇಯರ್ ಆಯ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಕಸರತ್ತಿನಲ್ಲಿ ತೊಡಗಿದ್ದರೆ, ಕಾಂಗ್ರೆಸ್ ಪಕ್ಷವು ಪಾಲಿಕೆಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಮಂಗಳವಾರ ಸಭೆ ನಡೆಸಿತು.ಕೆಪಿಸಿಸಿ ಕಚೇರಿಯಲ್ಲಿ ಶಾಸಕರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೆ.ಜೆ. ಜಾರ್ಜ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರತಿ ಪಕ್ಷದ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಿದರು. ಪಾಲಿಕೆಯ ಸದಸ್ಯರಾದ ಎಂ.ಕೆ. ಗುಣಶೇಖರ್, ಮಂಜುನಾಥರೆಡ್ಡಿ ಹಾಗೂ ಟಿ. ಮಲ್ಲೇಶ್ ಅವರ ಹೆಸರುಗಳು ಸಭೆಯಲ್ಲಿ ಪ್ರಸ್ತಾಪಗೊಂಡವು.ಈ ಮೂವರಲ್ಲಿ ಒಬ್ಬರನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.ಇದು ಚುನಾವಣಾ ವರ್ಷವೂ ಆಗಿರುವುದರಿಂದ ಪಾಲಿಕೆಯ ಸಭೆಯ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಹೋರಾಟ ನಡೆಸಿ, ಪಕ್ಷದ ಒಗ್ಗಟ್ಟನ್ನು ಹೆಚ್ಚಿಸುವ ಸಮರ್ಥ ನಾಯಕನ ಆಯ್ಕೆಯನ್ನು ಪಕ್ಷದ ಹೈಕಮಾಂಡ್ ಗುರುವಾರ ಪ್ರಕಟಿಸುವ ಸಂಭವವಿದೆ.

 

ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವಂತೆ ಪಕ್ಷದ ವರಿಷ್ಠರನ್ನು ಕೋರಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.