ಮಂಗಳವಾರ, ಮೇ 24, 2022
25 °C

ಪಾಲಿಟೆಕ್ನಿಕ್ ವಿದ್ಯಾರ್ಥಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಳಗಿ: ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ತಾಲ್ಲೂಕಿನ ಸುನಗ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 218ರ ಮೇಲೆ ಬಿಸಾಕಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿಯನ್ನು ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಅಂತಿಮ ವರ್ಷದಲ್ಲಿ ಓದುತ್ತಿದ್ದ ಪ್ರಶಾಂತ ಎಸ್.ಬೇವೂರ ಎಂದು ಗುರುತಿಸಲಾಗಿದೆ. ಮೃತನ ತಂದೆ ಆಲಮಟ್ಟಿಯಲ್ಲಿ ಎಂಜಿನಿಯರಾಗಿ ಕೆಲಸದಲ್ಲಿದ್ದಾರೆಂದು ಹೇಳಲಾಗುತ್ತಿದೆ.ಶವವನ್ನು ಕಂಡ ಸುನಗ ಗ್ರಾಮದ ಶಿವಪ್ಪ ಗದಿಗೆಪ್ಪ ಗಾಮಾ ಎಂಬುವವರು ನೀಡಿದ ದೂರಿನನ್ವಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠ ಅಭಿಷೇಕ್ ಗೋಯಲ್, ಜಮಖಂಡಿ ಡಿ.ವೈ.ಎಸ್.ಪಿ. ರವಿನಾರಾಯಣ, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಸ್. ಪಾಟೀಲ ಭೇಟಿ ನೀಡಿದ್ದರು. ಪಿ.ಎಸ್.ಐ. ಎಸ್.ಎಸ್. ಮಸೂತಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.