ಗುರುವಾರ , ಜುಲೈ 29, 2021
22 °C

ಪಾಶ್ಚಾತ್ಯ ಸಂಸ್ಕೃತಿ ಮೋಹ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಣನೂರು: ಆಧುನಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪಾಶ್ಚಾತ್ಯ ಸಂಸ್ಕೃತಿ ಪ್ರಭಾವಕ್ಕೆ ಒಳಗಾಗದೇ ಕಲಿಕೆಯೆಡೆಗೆ ಆದ್ಯತೆ ನೀಡಬೇಕು ಎಂದು ಸಾಹಿತಿ ರೂಪಾ ಹಾಸನ ನುಡಿದರು.ಪಟ್ಟಣದ ಬಿ.ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ವೇದಿಕೆ ಹಾಗೂ ಎನ್‌ಎಸ್‌ಎಸ್ ಮತ್ತು ಕ್ರೀಡಾ ವಿಭಾಗದ ಸಮಾರೋಪದಲ್ಲಿ ಅವರು ಮಾತನಾಡಿದರು. ಕಾಲ ಬದಲಾದಂತೆ ವಿದ್ಯಾರ್ಥಿಗಳ ಮನಸ್ಸು . ಆದರೆ ಅದು ಒಳ್ಳೆಯ ಕಾರ್ಯಗಳಿಗೆ ಸೀಮಿತವಾಗಿರಬೇಕು.ವಿದ್ಯಾರ್ಥಿ ದಿಸೆಯಲ್ಲಿ ಅನಗತ್ಯ ಕಾಲಾಹರಣ ಸಲ್ಲದು. ಪಾಶ್ಚಾತ್ಯ ಸಂಸ್ಕೃತಿ ಮೋಹಕ್ಕೆ ಅಂಟಿಕೊಳ್ಳದೇ ಓದಿನ ಕಡೆಗೆ ಗಮನಹರಿಸಿದರೆ ಸಾಧನೆ ಮಾಡಬಹುದು ಎಂದರು.ಕುಶಾಲನಗರ ಹಾರಂಗಿ ಯೋಜನಾ ಮಹಾಮಂಡಲ ಅಧ್ಯಕ್ಷ ಎಸ್.ಸಿ. ಚೌಡೇಗೌಡ ಮಾತನಾಡಿ, ಪ್ರಸ್ತುತ ಹಣವಿದ್ದರೆ ಮಾತ್ರ ಉನ್ನತ ಶಿಕ್ಷಣ ಎನ್ನುವಂತಾಗಿದೆ. ಇಂದು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಬಹಳಷ್ಟು ಮಂದಿ ಉನ್ನತ ಸಾಧನೆ ಮಾಡಿದ ಉದಾಹರಣೆಗಳಿವೆ ಎಂದರು.ಪ್ರಾಂಶುಪಾಲ ಪ್ರೊ. ಎನ್.ಎಸ್. ಶೇಖರ್‌ಸ್ವಾಮಿ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಶ್ರೀಧರ್, ಸಾಂಸ್ಕೃತಿಕ ವೇದಿಕೆ ಸಂಚಾಲಕ ಬಿ.ಕೆ. ಕುಮಾರ್, ಎನ್‌ಎಸ್‌ಎಸ್ ಸಂಚಾಲಕ ಡಾ. ಸೀನಪ್ಪ, ಕ್ರೀಡಾ ವಿಭಾಗದ ಸಂಚಾಲಕ ಕೆ.ಎಸ್. ಭಾಸ್ಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.