ಭಾನುವಾರ, ಮೇ 16, 2021
22 °C

ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆ ಬೇಡ

ಬೀದರ್: ಪ್ರಸ್ತುತ ಯುವಕರು ಭಾರತೀಯ ಸಂಸ್ಕೃತಿಯನ್ನು ಮರೆತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ಕಳವಳಕಾರಿ ಆಗಿದೆ ಎಂದು ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮುಖ್ಯಸ್ಥೆ ಅಂಜುಮ್ ಫಾತೀಮಾ ಹೇಳಿದರು.ಶಿಕ್ಷಕರ ದಿನಾಚರಣೆ ನಿಮಿತ್ತ ಕರ್ನಾಟಕ ಶಿಕ್ಷಣ ಸಂಸ್ಥೆಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ಸದ್ಯ ಪ್ರತಿಯೊಂದರಲ್ಲಿಯು ಸ್ಪರ್ಧೆ ಇದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗ ತೋರಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.ಸರ್ವಪಲ್ಲಿ ರಾಧಾಕೃಷ್ಣನ್ ಸರಳ ಮತ್ತು ಆದರ್ಶ ವ್ಯಕ್ತಿ ಆಗಿದ್ದರು. ಇಂದಿನ ಯುವಕರು ಅವರ ವಿಚಾರಗಳನ್ನು ಅನುಕರಿಸುವ ಅಗತ್ಯವಿದೆ ಎಂದು ಉಪನ್ಯಾಸಕ ದೇವಿದಾಸ ಜೋಶಿ ಅಭಿಪ್ರಾಯಪಟ್ಟರು.ಮತ್ತೋರ್ವ ಉಪನ್ಯಾಸಕ ಹುಸೇನಿ ಕಲ್ಲಪ್ಪ ಮಾತನಾಡಿದರು. ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯುನಸಖಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಅಜಿಮೊದ್ದೀನ್, ಡಾ. ತಾಹೇರಾ, ಅಮರನಾಥ ರೆಡ್ಡಿ ಉಪಸ್ಥಿತರಿದ್ದರು. ನೇಹಾಕುಮಾರಿ ಸ್ವಾಗತಿಸಿದರು. ಪ್ರಿಸ್ಕಿಲಾ, ವಿದ್ಯಾರಾಣಿ ನಿರೂಪಿಸಿದರು. ಪೂಜಾಶ್ರೀ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.