ಬುಧವಾರ, ಮೇ 25, 2022
22 °C

ಪಾಸ್ಕಲ್‌ಗೆ ಬಿಗಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿತರಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಫ್ರಾನ್ಸ್ ಕಾನ್ಸುಲ್ ಜನರಲ್ ಕಚೇರಿಯ ಅಧಿಕಾರಿ ಪಾಸ್ಕಲ್ ಮುಜುರಿಯರ್ ಅವರನ್ನು ಜೈಲಿನ ಅತಿ ಭದ್ರತಾ ವಿಭಾಗದಲ್ಲಿ (ಹೈ ಸೆಕ್ಯುರಿಟಿ ಬ್ಲಾಕ್) ಇರಿಸಲಾಗಿದೆ.`ಪಾಸ್ಕಲ್ ಅವರಿಗೆ ಜೈಲಿನಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಸರ್ಕಾರದಿಂದ ಸೂಚನೆ ಬಂದಿದೆ. ಆದ ಕಾರಣ ಅತಿ ಭದ್ರತಾ ವಿಭಾಗದ ಕೊಠಡಿಯಲ್ಲಿ ಅವರೊಬ್ಬರನ್ನೇ ಇರಿಸಲಾಗಿದೆ. ಆ ಕೊಠಡಿಯ ಕಾವಲಿಗೆ ಸಿಬ್ಬಂದಿಯನ್ನು ನೇಮಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಅವರಿಗೆ 6102 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ~ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.ಫ್ರಾನ್ಸ್‌ನ ಕಾನ್ಸುಲ್ ಜನರಲ್ ಕಚೇರಿಯ ಡೆಪ್ಯೂಟಿ ಕಾನ್ಸುಲ್ ವಿನ್ಸೆಂಟ್ ಕೌಮಾಟೆಂಟ್ ಅವರು ಪಾಸ್ಕಲ್ ಅವರನ್ನು ಜೈಲಿನಲ್ಲಿ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.  ಪಾಸ್ಕಲ್ ಅವರಿಗೆ ಬುಧವಾರ ಬೆಳಗಿನ ಉಪಾಹಾರಕ್ಕೆ ಅವಲಕ್ಕಿ ನೀಡಲಾಗಿತ್ತು. ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಚಪಾತಿ ಹಾಗೂ ಅನ್ನ ಸಾಂಬಾರ್ ಕೊಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದರು.ಶಿಕ್ಷೆಗೆ ಒತ್ತಾಯ:
`ಮೂರುವರೆ ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಪಾಸ್ಕಲ್ ಮುಜುರಿಯರ್‌ಗೆ ಕಠಿಣ ಶಿಕ್ಷೆ ನೀಡಬೇಕು~ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಒತ್ತಾಯಿಸಿದೆ.ಪಾಸ್ಕಲ್ ತನ್ನ ಹಸುಗೂಸಿನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿರು ವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಸಾರ್ವಜನಿಕರಲ್ಲಿ ಆಘಾತ ಉಂಟು ಮಾಡಿರುವ ಈ ಘಟನೆ ಬಲಿಪಶುವಾಗಿರುವ ಮಗುವಿನ ಜೀವನವನ್ನಷ್ಟೆ ಅಲ್ಲದೆ, ಸಮಾಜದ ಸ್ವಾಸ್ಥ್ಯವನ್ನು ಕದಡಿದೆ. ವಿಳಂಬ ಮಾಡದೆ ಪಾಸ್ಕಲ್‌ಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.