ಪಾಸ್‌ಪೋರ್ಟ್ ದಾಖಲೆ ಸಲ್ಲಿಸಲು ಕೋರ್ಟ್ ಸೂಚನೆ

7

ಪಾಸ್‌ಪೋರ್ಟ್ ದಾಖಲೆ ಸಲ್ಲಿಸಲು ಕೋರ್ಟ್ ಸೂಚನೆ

Published:
Updated:

ಬೆಂಗಳೂರು: ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಮಲಮಗಳು ಆರುಣಿಯ ಪಾಸ್‌ಪೋರ್ಟ್ ನವೀಕರಣ ಅರ್ಜಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹಾಜರುಪಡಿಸುವಂತೆ ಹೈಕೋರ್ಟ್ ಪಾಸ್‌ಪೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.`ತಾನೇ ಆರುಣಿಯ ನೈಜ ತಂದೆ ಎಂದು ಕುಂಬ್ಳೆ ಪಾಸ್‌ಪೋರ್ಟ್ ನವೀಕರಣ ಅರ್ಜಿಗೆ ಸಹಿ ಮಾಡಿದ್ದಾರೆ. ಆದ್ದರಿಂದ ಪಾಸ್‌ಪೋರ್ಟ್ ಅಧಿಕಾರಿಗಳು ಕುಂಬ್ಳೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ, ಆರುಣಿ ತಂದೆ ಕುಮಾರ್ ಜಗದೀರ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿಲೀಪ್ ಭೋಸಲೆ ಈ ನಿರ್ದೇಶನ ನೀಡಿದರು. ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry