ಮಂಗಳವಾರ, ಮೇ 11, 2021
27 °C

ಪಿಂಚಣಿಗೂ ಆಧಾರ್ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಇನ್ನು ಮುಂದೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಆಪೇಕ್ಷಿಸಿ ಅರ್ಜಿ ನೀಡುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಸಂಖ್ಯೆ ನೀಡಬೇಕು.ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಲಾಗಿದೆ.ಅದರಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆರು ತಿಂಗಳೊಳಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಪಡೆದು ಸಂಬಂಧಪಟ್ಟ ತಹಸೀಲ್ದಾರರಿಗೆ ಸಲ್ಲಿಸಲು ಸೂಚಿಸಲಾಗಿದೆ.ಆರು ತಿಂಗಳೊಳಗೆ ತಹಸೀಲ್ದಾರರಿಗೆ ಆಧಾರ್ ಸಂಖ್ಯೆ ಸಲ್ಲಿಸದೇ ಇದ್ದಲ್ಲಿ ಅಂತಹ ಫಲಾನುಭವಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ  ತಡೆಹಿಡಿಯಲಾಗುತ್ತದೆ.ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿದಾರರು ಆಧಾರ್ ಸಂಖ್ಯೆ ನೀಡುವ ಸಲುವಾಗಿ ಜನ ವಿವರಣೆಯನ್ನು ಹಾಗೂ ಬಯೋ ಮೆಟ್ರಿಕ್ಸ್ ಸಂಗ್ರಹಿಸುವ ಸಂದರ್ಭದಲ್ಲಿ ಪಿಂಚಣಿದಾರರು ಕಡ್ಡಾಯವಾಗಿ ಮನಿಆರ್ಡರ್ ರಶೀದಿ ಅಥವಾ ಬ್ಯಾಂಕ್ ಪಾಸ್ ಬುಕ್ಕನ್ನು ಆಧಾರ್ ನೊಂದಣಿ ಕೇಂದ್ರಕ್ಕೆ ತರುವಂತೆ ಸೂಚಿಸಲಾಗಿದೆ ಎಂದು  ಉಡುಪಿ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.