ಶನಿವಾರ, ಮೇ 8, 2021
26 °C

`ಪಿಂಚಣಿ ತಾರತಮ್ಯ: ಸಿಎಂ ಬಳಿ ಶೀಘ್ರ ನಿಯೋಗ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಸರ್ಕಾರಿ ಸೇವೆಯಲ್ಲಿ ಸುದೀರ್ಘ ಕಾಲವನ್ನು ಕ್ರಮಿಸಿರುವ ನಿವೃತ್ತ ನೌಕರರು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ತಹಶೀಲ್ದಾರ್ ಎನ್. ವೆಂಕಟಾಚಲಪ್ಪ ಅಭಿಪ್ರಾಯಪಟ್ಟರು.ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಈಚೆಗೆ ನಡೆದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಮಹಮ್ಮದ್ ಮಾತನಾಡಿ, ರಾಜ್ಯದಲ್ಲಿ 4.60 ಲಕ್ಷ ನಿವೃತ್ತ ಸರ್ಕಾರಿ ನೌಕರರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿವೃತ್ತ ನೌಕರರ ನಡುವೆ ಪಿಂಚಣಿ ತಾರತಮ್ಯವಿದೆ. ಇದನ್ನು ನಿವಾರಿಸುವಂತೆ ಮನವಿ ಮಾಡಿಕೊಳ್ಳಲು ಸದ್ಯದಲ್ಲಿಯೇ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಬೇಕು ಎಂದರು.ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಸಿ.ರಾಜಶೇಖರ್, ನಿವೃತ್ತ ಪ್ರಾಂಶುಪಾಲ ದಾಮೋದರ್ ಹಾಜರಿದ್ದರು.

ಶಿಕ್ಷಣ ಇಲಾಖೆಯ ಡಿ.ಪಿ. ಹೂವಯ್ಯ, ತಾಲ್ಲೂಕು ಪಂಚಾಯಿತಿಯ ಕೆ.ಬಿ. ಈರಪ್ಪ, ಕಂದಾಯ ಇಲಾಖೆಯ ಪಿ.ಯು. ಸರೋಜಾ ಅವರನ್ನು ಸನ್ಮಾನಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.