ಭಾನುವಾರ, ಮೇ 22, 2022
21 °C

ಪಿಎಫ್‌ಐನಿಂದ ಜನಜಾಗೃತಿ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವತಿಯಿಂದ ನವೆಂಬರ್ 26 ಹಾಗೂ 27ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸಾಮಾಜಿಕ ನ್ಯಾಯ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪಿಎಫ್‌ಐ ಜಿಲ್ಲಾ ಘಟಕದಿಂದ ಪ್ರಚಾರ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.ಪಿಎಫ್‌ಐ ರಾಜ್ಯ ಸಮಿತಿ ಸದಸ್ಯ ಮಹಮ್ಮದ್ ರಿಯಾಜ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಮಹಮ್ಮದ್ ರಫಿಕ್ ಲಷ್ಕರ್ ಪತ್ರಿಕಾ ಗೋಷ್ಠಿಯಲ್ಲಿ ಬುಧವಾರ ಈ ಮಾಹಿತಿ ನೀಡಿದರು.ಪ್ರಚಾರ ಅಭಿಯಾನದ ಅಂಗವಾಗಿ ಅ. 17ರಂದು ಮಧ್ಯಾಹ್ನ 3.30ಕ್ಕೆ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಚಿಂತಕರು ಹಾಗೂ ಪ್ರಗತಿಪರ ಮುಖಂಡರೊಂದಿಗೆ ವಿಚಾರ ಗೋಷ್ಠಿ ಏರ್ಪಡಿಸಲಾಗಿದೆ. ಅ. 23ರಂದು ಸಂಜೆ 5ಕ್ಕೆ ಇಂಡಿ ಪಂಪ್ ಹತ್ತಿರದ ಅಂಬೇಡ್ಕರ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.ಸಮಾಜದ ಎಲ್ಲ ವರ್ಗಗಳಿಗೆ ಪ್ರತಿಯೊಂದು ರಂಗದಲ್ಲೂ ಸಮಾನ ನ್ಯಾಯನವನ್ನು ಖಾತರಿಪಡಿಸುವ ಸಾಮಾಜಿಕ ಹಾಗೂ ರಾಜಕೀಯ ಬದಲಾವಣೆ ಅಗತ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದೇ ಸಮಾವೇಶದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಮುಖಂಡರಾದ ಎಂ.ಎಫ್. ಕಲೀಂ ಹಾಗೂ ಮಹಮ್ಮದ್ ಅಲಿ ಹಾಜರಿದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.