ಪಿಜಿಸಿಇಟಿ ಅಕ್ರಮ: ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ

7

ಪಿಜಿಸಿಇಟಿ ಅಕ್ರಮ: ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ

Published:
Updated:

ಬಳ್ಳಾರಿ: ಸ್ಥಳೀಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ವಿಮ್ಸ) 2011ರಲ್ಲಿ ನಡೆದಿರುವ ವೈದ್ಯಕೀಯ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ 645 ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದರು.


ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿದಂತೆ 21 ಆರೋಪಿಗಳ ವಿರುದ್ಧ 1,278 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಐಡಿ, ಗುರುವಾರ ಇನ್‌ಸ್ಪೆಕ್ಟರ್ ಸೈಮನ್ ನೇತೃತ್ವದಲ್ಲಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಜಿಲ್ಲಾ ನ್ಯಾಯಾಧೀಶ ಡಿ.ವಿಶ್ವೇಶ್ವರ ಭಟ್ ಅವರಿಗೆ ಸಲ್ಲಿಸಿದೆ. ವಿಚಾರಣೆಯು 2013ರ ಜನವರಿ 2ರಂದು ನಡೆಯಲಿದೆ.

 

ಹಿನ್ನೆಲೆ:  ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು 2011ರಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಯನ್ನು ನಗರದ ವಿಮ್ಸ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಿದ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ವಿಮ್ಸನ ಕರ್ತವ್ಯನಿರತ ವೈದ್ಯರು ಸೇರಿದಂತೆ 17ಕ್ಕೂ ಹೆಚ್ಚು ಅಭ್ಯರ್ಥಿಗಳು ಉನ್ನತ ರ‌್ಯಾಂಕ್ ಗಳಿಸಿದ್ದರು.

 

ವಿಮ್ಸ ವೈದ್ಯರು, ಪ್ರಭಾವಿ ಮುಖಂಡರ ಸಂಬಂಧಿಗಳು ರ‌್ಯಾಂಕ್ ಪಡೆದವರಲ್ಲಿ ಸೇರಿದ್ದರಿಂದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿತ್ತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry