ಭಾನುವಾರ, ಜೂನ್ 13, 2021
21 °C

ಪಿಜಿಸಿಇಟಿ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ನಾತಕೋತ್ತರ ವೈದ್ಯ ಕೀಯ, ದಂತವೈದ್ಯಕೀಯ ಕೋರ್ಸ್‌­ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ­ವಿದೆ. ತಾತ್ಕಾಲಿಕ ರ್‌್ಯಾಂಕ್‌ ಪಟ್ಟಿ ಪ್ರಕಟ ವಾ­ಗಿದ್ದು,  ಇದು ಸುಪ್ರೀಂ ಕೋರ್ಟ್‌ ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿ­ರುತ್ತದೆ ಎಂದು ತಿಳಿಸಲಾಗಿದೆ.ರಾಷ್ಟ್ರೀಯ ಪರೀಕ್ಷಾ ಮಂಡಳಿ ಈ ಬಾರಿ ಪ್ರವೇಶ ಪರೀಕ್ಷೆ ನಡೆಸಿತ್ತು. ಮೊದಲು ಕರ್ನಾಟಕದ ವಿದ್ಯಾರ್ಥಿ­ಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶ ನೀಡಲಾಗಿತ್ತು.

ಕೆಲವರು ನ್ಯಾಯಾಲಯದ ಮೊರೆ ಹೋದ ಕಾರಣ ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅನುಮತಿ ನೀಡ­ಲಾಗಿತ್ತು. ಆದರೆ, ಅಂತಹ ವಿದ್ಯಾರ್ಥಿ­ಗಳ ಫಲಿತಾಂಶವನ್ನು ತಡೆಹಿಡಿಯ­ಲಾ­ಗಿದೆ. ಶುಕ್ರವಾರ ಈ ಪ್ರಕರಣದ ವಿಚಾ­ರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯ­ಲಿದೆ. ಇದಾದ ನಂತರ ಕೌನ್ಸೆಲಿಂಗ್‌ ದಿನಾಂಕ  ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.