ಪಿ.ಜಿ ಕೇಂದ್ರ ಕಾಮಗಾರಿ ಆರಂಭಿಸಿ

ಭಾನುವಾರ, ಮೇ 19, 2019
32 °C

ಪಿ.ಜಿ ಕೇಂದ್ರ ಕಾಮಗಾರಿ ಆರಂಭಿಸಿ

Published:
Updated:

ಕೋಲಾರ: ತಾಲ್ಲೂಕಿನ ಮಂಗಸಂದ್ರ ಸಮೀಪ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡ ಕಾಮಗಾರಿಗೆ ಕೂಡಲೇ ಚಾಲನೆ ಕೊಡಬೇಕು ಎಂದು ಆಗ್ರಹಿಸಿ ಕೇಂದ್ರದ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.ಬಾಲಕರ ಸರ್ಕಾರಿ ಕಾಲೇಜಿನ ಒಳ ಆವರಣದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೇಂದ್ರದಲ್ಲಿ ಹಲವು ಸಮಸ್ಯೆಗಳಿವೆ. ಶೌಚಾಲಯ, ಗ್ರಂಥಾಲಯ, ವಿದ್ಯಾರ್ಥಿ ಕೊಠಡಿ, ಅಧ್ಯಾಪಕರ ಕೊಠಡಿ, ತರಗತಿ ಕೊಠಡಿಗಳ ಕೊರತೆ ಹೆಚ್ಚಿದೆ. ಇದೇ ವೇಳೆ, ಹೊಸ ಕಟ್ಟಡ ಕಾಮಗಾರಿ ಕೆಲವು ವರ್ಷಗಳಿಂದ ತೆವಳುತ್ತಿದೆ.

ಕೆಲವು ತಿಂಗಳಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾಮಗಾರಿಯನ್ನು ಪೂರ್ಣ ಗೊಳಿಸಬೇಕು ಎಂದು ಧರಣಿ, ಪ್ರತಿಭಟನೆ ನಡೆಸಿದ ಸಂದರ್ಭಗಳಲ್ಲಿ ಭರವಸೆ ನೀಡುವ ವಿವಿ ಅಧಿಕಾರಿಗಳು ನಂತರ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಕೇಂದ್ರದ ಎಲ್ಲರಿಗೂ ತೊಂದರೆಯಾಗಿದೆ ಎಂದು ಆರೋಪಿಸಿದರು.ಕೇಂದ್ರದಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಕಾಲೇಜು ವೃತ್ತ, ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿ ಮುಖಂಡ ಸುರೇಶ್‌ಗೌಡ, ವಿದ್ಯಾರ್ಥಿಗಳಾದ ದೇವರಾಜ್, ಶಂಕರ್, ಶ್ರೀನಿವಾಸ್, ಕೃಷ್ಣಪ್ಪ, ಹರೀಶ್, ತಿಮ್ಮರಾಯಪ್ಪ, ಮಂಜುನಾಥ್, ಶಿಲ್ಪ, ಭಾರ್ಗವಿ, ಮಂಜುಳ, ಜಯಮ್ಮ ನೇತೃತ್ವ ವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry