ಶನಿವಾರ, ಸೆಪ್ಟೆಂಬರ್ 21, 2019
21 °C

ಪಿಜಿ ವೈದ್ಯಕೀಯ ಕೋರ್ಸ್: ಇಂದು ಮರು ಕೌನ್ಸೆಲಿಂಗ್

Published:
Updated:

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಸೇವಾನಿರತ ವೈದ್ಯರಿಗೆ ಮಂಗಳವಾರ ಮರು ಕೌನ್ಸೆಲಿಂಗ್ ನಡೆಯಲಿದೆ. ಸೀಟು ಹಂಚಿಕೆ ಪಟ್ಟಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ.ಡಿ.ಪ್ರೇಮ್‌ಕುಮಾರ್ ತಿಳಿಸಿದ್ದಾರೆ.ಮಧ್ಯಾಹ್ನ 3 ಗಂಟೆಗೆ ಜಯನಗರದಲ್ಲಿರುವ ವಿಶ್ವವಿದ್ಯಾಲಯ ಆವರಣದಲ್ಲಿ ಕೌನ್ಸೆಲಿಂಗ್ ನಡೆಯಲಿದ್ದು, ಸೇವಾನಿರತ ವೈದ್ಯರ ಅರ್ಹತಾ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.ಇದೇ 9ರಂದು ಕೌನ್ಸೆಲಿಂಗ್ ನಡೆಸಲು ಉದ್ದೇಶಿಸಲಾಗಿತ್ತಾದರೂ ಕೊನೆಗಳಿಗೆಯಲ್ಲಿ ಯಾವುದೇ ಕಾರಣ ನೀಡದೆ ಮುಂದೂಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ಮರು ಕೌನ್ಸೆಲಿಂಗ್ ನಡೆಯುತ್ತಿದೆ.

Post Comments (+)