ಬುಧವಾರ, ಮೇ 12, 2021
18 °C

ಪಿಡಿಎ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಡೀಮ್ಡ ಮಾನ್ಯತೆ ಪಡೆದಿರುವ ಪೂಜ್ಯ ದೊಡ್ಡಪ್ಪ ಅಪ್ಪಾ ಎಂಜಿನಿಯರಿಂಗ್ ಕಾಲೇಜು ಆಡಳಿತವು

ಸ್ವಾಯತ್ತತೆಯ ದುರುಪಯೋಗ ಮಾಡುತ್ತಿದೆ. ಇದರಿಂದ ದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಬಳಿಕ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.ಹಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಿಲ್ಲ. ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಎಂದು ತೋರಿಸಲಾಗಿದೆ. ದಿನದಿಂದ ದಿನಕ್ಕೆ ಹೊಸ ಹೊಸ ನಿಯಮಾವಳಿ ರೂಪಿಸುವ ಮೂಲಕ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಿದರು.8 ವಿಷಯಗಳ ತರಗತಿಗೆ 13,000 ರೂಪಾಯಿ ಸಂಗ್ರಹಿಸಿ, ಕೇವಲ ಎರಡು ವಿಷಯಗಳ ತರಗತಿ ನಡೆಸಲಾಗಿದೆ. ಆದರೆ ಬಾಕಿ ಹಣವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಿಲ್ಲ.

 

ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಆದರೆ ಆಡಳಿತ ಮಂಡಳಿಯವರು ಏಕಾಏಕಿ ಹೊರಕಳುಹಿಸಿದ ಘಟನೆ ಈ ಹಿಂದೆ ನಡೆದಿತ್ತು ಎಂದು ಧರಣಿ ನಿರತ ವಿದ್ಯಾರ್ಥಿಗಳು ದೂರಿದರು.ಆಡಳಿತ ಮಂಡಳಿ ದೌರ್ಜನ್ಯದ ವಿರುದ್ಧ ಕ್ರಮಕೈಗೊಳ್ಳಬೇಕು. ಮುಂದಿನ ವರ್ಷ ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಪರ್ಯಾಯ ಅವಕಾಶ ಕಲ್ಪಿಸಬೇಕು. ಇಂಟರ್ನಲ್ (ಆಂತರಿಕ ಪರೀಕ್ಷೆ) ಪದ್ಧತಿ ಬದಲಾಯಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.