ಪಿಡಿಒಗಳಿಗೆ ಕಿರುಕುಳ: ಸರ್ಕಾರದ ಎಚ್ಚರಿಕೆ
ಬೆಂಗಳೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಕಿರುಕುಳ ನೀಡುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರನ್ನು ಇನ್ನು ಮುಂದೆ ಸದಸ್ಯತ್ವ ದಿಂದಲೇ ಅನರ್ಹಗೊಳಿಸಲಾಗು ವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್ ಶನಿವಾರ ಇಲ್ಲಿ ತಿಳಿಸಿದರು.
ಅಧಿಕಾರಿಗಳ ಮೇಲೆ ಕೈಮಾಡುವ ಮತ್ತು ಕಿರುಕುಳ ನೀಡುವ ಪ್ರಕರಣ ಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಪತ್ರಿಕಾ ಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು. ಹಲವು ಸುತ್ತಿನ ಮಾತುಕತೆ ನಂತರ ಪಿಡಿಒಗಳು ಸಾಮೂಹಿಕ ರಾಜೀ ನಾಮೆಯಿಂದ ಹಿಂದೆ ಸರಿದಿದ್ದಾರೆ. ಕಿರುಕುಳ ನೀಡಿದ ವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು. ಇದರ ಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಪಂಚಾ ಯಿತಿಗಳ ಸಿಇಒ ಮತ್ತು ತಾಲ್ಲೂಕು ಪಂಚಾಯಿತಿಗಳ ಇಒ ಗಳಿಗೆ ವಹಿಸ ಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.