ಪಿಡಿಒ ಆತ್ಮಹತ್ಯೆ: ಸಿಐಡಿ ತನಿಖೆಗೆ ಆಗ್ರಹ

7

ಪಿಡಿಒ ಆತ್ಮಹತ್ಯೆ: ಸಿಐಡಿ ತನಿಖೆಗೆ ಆಗ್ರಹ

Published:
Updated:

ಮಾಲೂರು: ಗುಲ್ಬರ್ಗದ ಸಣ್ಣೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪಿಡಿಒ ಮಂದಾಕಿನಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಪಿಡಿಒಗಳು ಬುಧವಾರ ತಾಲ್ಲೂಕು ಪಂಚಾಯಿತಿ ಇಒಗೆ ಮನವಿ ನೀಡಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖಾ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್‌ಮೂರ್ತಿ ಮಾತನಾಡಿ, ಪಿಡಿಒ ಮಂದಾಕಿನಿಗೆ ಕಿರುಕುಳ ಕೊಟ್ಟು ಆತ್ಮಹತ್ಯೆಗೆ ಕಾರಣರಾಗಿರುವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ತಾಲ್ಲೂಕಿನ 28 ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಕಾರ್ಯದರ್ಶಿಗಳು ಬುಧವಾರ ಸಾಮೂಹಿಕ ರಜೆ ಹಾಕುವ ಮೂಲಕ ಮಂದಾಕಿನಿ ಆತ್ಮಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದರು.ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ತಾಲ್ಲೂಕು ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಕಾರ್ಯದರ್ಶಿ ಸುಮತಿ, ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry