ಸೋಮವಾರ, ಮೇ 17, 2021
21 °C

ಪಿತ್ರೋಡಾ ನೇತೃತ್ವದ ತಜ್ಞರ ಸಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ರೈಲು ಮಾರ್ಗಗಳು, ಸಿಗ್ನಲ್‌ಗಳು ಮತ್ತು ನಿಲ್ದಾಣಗಳ ಆಧುನೀಕರಣಕ್ಕೆ ಸೂಕ್ತ ಶಿಫಾರಸುಗಳನ್ನು ಮಾಡಲು ಸ್ಯಾಮ್ ಪಿತ್ರೋಡಾ ಅಧ್ಯಕ್ಷತೆಯಲ್ಲಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ.ರೈಲ್ವೆಯನ್ನು ನಾಲ್ಕನೇ ತಲೆಮಾರಿಗೆ ಒಯ್ಯುವ ಉದ್ದೇಶದಿಂದ ಆಧುನೀಕರಣದ ಶಿಫಾರಸಿಗೆ ಈ  ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಸಚಿವ ದಿನೇಶ್ ತ್ರಿವೇದಿ ತಿಳಿಸಿದ್ದಾರೆ.ಎಚ್‌ಡಿಎಫ್‌ಸಿ ಅಧ್ಯಕ್ಷ ದೀಪಕ್ ಪ್ರಕಾಶ್, ಎಸ್‌ಬಿಐ ಮಾಜಿ ಅಧ್ಯಕ್ಷ ಎಂ.ಎಸ್.ವರ್ಮ, ಅಹಮದಾಬಾದ್ ಐಐಎಂ ಪ್ರೊ. ರಘುರಾಮ್, ಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಲಾಲ್ ಮತ್ತು ಫೀಡ್‌ಬ್ಯಾಕ್ ಇನ್‌ಫ್ರಾಸ್ಟ್ರಕ್ಚರ್ ಸರ್ವೀಸಸ್‌ನ ಅಧ್ಯಕ್ಷ ವಿನಾಯಕ್ ಚಟರ್ಜಿ ಸಮಿತಿಯ ಸದಸ್ಯರಾಗಿರುತ್ತಾರೆ.

 

ಎರಡು ತಿಂಗಳಲ್ಲಿ ಸಮಿತಿಯು ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ರೈಲ್ವೆ ಮಾಜಿ ಸಚಿವೆ ಮಮತಾ ಬ್ಯಾನರ್ಜಿ ಸಿದ್ಧಪಡಿಸಿದ್ದ 2010ರ ಮುನ್ನೋಟ ವರದಿಯನ್ನು ಶೀಘ್ರವಾಗಿ ಜಾರಿ ಮಾಡುವ ಕಾಲ ಸನ್ನಿಹಿತವಾಗಿದೆ.ಆಧುನೀಕರಣದ ಆರಂಭಿಕ ಕೆಲಸವನ್ನು ಮಮತಾ ಅವರ ಕಾಲದಲ್ಲೇ ಆರಂಭ ಮಾಡಲಾಗಿರುವುದರಿಂದ ಈಗ ಆ ಕೆಲಸವನ್ನು ತ್ವರಿತವಾಗಿ ಪೂರ್ತಿಗೊಳಿಸಬೇಕಾಗಿದೆ ಎಂದು ಪಿತ್ರೋಡಾ ತಿಳಿಸಿದ್ದಾರೆ.ರೈಲ್ವೆ ಸುರಕ್ಷತೆಯ ಬಗ್ಗೆ ಶಿಫಾರಸು ಮಾಡಲು ಕಳೆದ ವಾರ ಪರಮಾಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ನೇಮಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.