ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ 17ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ‘ಸಹಾಯವಾಣಿ’ ಆರಂಭಿಸಿದೆ.

ಇದೇ 7ರಿಂದ 15ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಹಾಯವಾಣಿ ಕಾರ್ಯನಿರ್ವಹಿಸಲಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಇಲಾಖೆಯ ಅಧಿಕಾರಿಗಳು ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ತಜ್ಞರು ಮಾರ್ಗದರ್ಶನ ಮಾಡಲಿದ್ದಾರೆ.

ಮಾನಸಿಕ ಒತ್ತಡ, ಅಭ್ಯಾಸ ಮಾಡುವ ರೀತಿ, ಪಾಠಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಡಲು ಸಹಾಯವಾಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೂರವಾಣಿ ಸಂಖ್ಯೆ: 1800-425-21234ಕ್ಕೆ ಉಚಿತ ಕರೆ ಮಾಡಬಹುದು.

ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ವಿಧಾನ, ಅಧ್ಯಯನ ಕೌಶಲ್ಯ, ಪರೀಕ್ಷಾ ಭೀತಿ, ಸಮಯ ನಿರ್ವಹಣೆ, ಜ್ಞಾಪಕ ಶಕ್ತಿ ಕಡಿಮೆ, ತಂದೆ- ತಾಯಿ/ಸ್ನೇಹಿತರ ಒತ್ತಡ, ಮುಂದಿನ ಶಿಕ್ಷಣ ಕುರಿತ ಗೊಂದಲ, ವಿದ್ಯಾರ್ಥಿಗಳ ವರ್ತನೆಯಲ್ಲಿ ಆಗುವ ಬದಲಾವಣೆ, ಇಷ್ಟವಿಲ್ಲದ ವಿಷಯಗಳನ್ನು ಓದಬೇಕಾದ ಅನಿವಾರ್ಯತೆ ಇತ್ಯಾದಿ ಪ್ರಶ್ನೆಗಳನ್ನು ಕೇಳಬಹುದು.

ಅಲ್ಲದೆ ಪ್ರವೇಶ ಪತ್ರ ಬಾರದಿರುವುದು/ಕಳೆದು ಹೋಗಿರುವುದು, ಪತ್ರದಲ್ಲಿ ತಪ್ಪಾಗಿ ಮುದ್ರಣವಾಗಿರುವುದು, ಶೇ 75ರಷ್ಟು ಹಾಜರಾತಿ ಇಲ್ಲದೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡದೆ ಇರುವುದು, ಸಿಇಟಿ ಕುರಿತ ಮಾಹಿತಿ ಬಗ್ಗೆಯೂ ಪ್ರಶ್ನೆಗಳನ್ನು ಕೇಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.