ಗುರುವಾರ , ಏಪ್ರಿಲ್ 22, 2021
29 °C

ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಗುರುವಾರದಿಂದ ಇದೇ 30ರವರೆಗೆ ಪದವಿ ಪೂರ್ವ ದ್ವಿತೀಯ ವರ್ಷದ ಪರೀಕ್ಷೆ ಆರಂಭಗೊಳ್ಳಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯವಸ್ಥಿತ ರೀತಿಯಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ   ಮಾಡಿಕೊಂಡಿದೆ.  ಜಿಲ್ಲೆಯಲ್ಲಿ ಒಟ್ಟು 25 ಪರೀಕ್ಷಾ ಕೇಂದ್ರಗಳಿದ್ದು, ಅದರಲ್ಲಿ 6 ಸಾಮಾನ್ಯ, 16 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.ರಾಯಚೂರು ನಗರದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4,606 ವಿದ್ಯಾರ್ಥಿಗಳು, ಮಾನ್ವಿ ತಾಲ್ಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,664 ವಿದ್ಯಾರ್ಥಿಗಳು, ಸಿಂಧನೂರು ತಾಲ್ಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,330 ವಿದ್ಯಾರ್ಥಿಗಳು, ಲಿಂಗಸುಗೂರು ತಾಲ್ಲೂಕಿನ 5ಪರೀಕ್ಷಾ ಕೇಂದ್ರಗಳಲ್ಲಿ 3,317 ವಿದ್ಯಾರ್ಥಿಗಳು, ದೇವದುರ್ಗ  ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,059 ವಿದ್ಯಾರ್ಥಿಗಳು   ಸೇರಿದಂತೆ ಒಟ್ಟು 12,976 ಹಾಗೂ 1,451 ವಿದ್ಯಾರ್ಥಿಗಳು ಮರು ಮತ್ತು ನೇರ ಪರೀಕ್ಷೆ ಬರೆಯಲಿದ್ದಾರೆ.ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು: ದೇವದುರ್ಗದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು  ಸೇರಿದಂತೆ ಒಟ್ಟು 3 ಅತಿ ಸೂಕ್ಷ್ಮ   ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.


 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.