ಸೋಮವಾರ, ಜೂನ್ 14, 2021
21 °C

ಪಿಯುಸಿ ಪರೀಕ್ಷೆ: 13 ವಿದ್ಯಾರ್ಥಿಗಳ ಡಿಬಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನ ಒಟ್ಟು 13 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ.ಇತಿಹಾಸ ಮತ್ತು ಗಣಕ ವಿಜ್ಞಾನ (ಕಂಪ್ಯೂಟರ್ ಸೈನ್ಸ್) ವಿಷಯದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವರನ್ನು ಪತ್ತೆಹಚ್ಚಿ ಡಿಬಾರ್ ಮಾಡಲಾಗಿದೆ.ಉಳಿದಂತೆ ಎಲ್ಲ ಕಡೆ ಸುಸೂತ್ರವಾಗಿ ಪರೀಕ್ಷೆ ನಡೆಯಿತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ವಿಜಾಪುರ ಜಿಲ್ಲೆಯಲ್ಲಿ ಮೂವರು, ಬೆಳಗಾವಿ, ಕೋಲಾರ, ಧಾರವಾಡ ಜಿಲ್ಲೆಯಲ್ಲಿ ತಲಾ ಇಬ್ಬರು, ಬಾಗಲಕೋಟೆ, ಗುಲ್ಬರ್ಗ, ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ ಒಬ್ಬ ಪರೀಕ್ಷಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.