ಬುಧವಾರ, ಮೇ 18, 2022
28 °C

ಪಿಯುಸಿ ಪ್ರಶ್ನೆ ಪತ್ರಿಕೆ ಬಯಲು: ಮರು ಪರೀಕ್ಷೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಬ್ಬಿ: ದ್ವಿತೀಯ ಪಿಯುಸಿ ಭೌತವಿಜ್ಞಾನ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ವಜಾಗೊಂಡಿರುವ ಶಾಲಾ ಶಿಕ್ಷಕ ವೀರಮಲ್ಲಯ್ಯ ಹಾಗೂ ತಾಲ್ಲೂಕಿನ ಬಿದರೆ ಸಮೀಪದ ಕಗ್ಗೆರೆ ಗ್ರಾಮದ ವಿದ್ಯಾರ್ಥಿ ಕುಮಾರ್ ಬಂಧಿತ ಆರೋಪಿಗಳು.

ಬುಧವಾರ ಭೌತವಿಜ್ಞಾನ ಪರೀಕ್ಷೆ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗನಾಥ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡಿರುವುದು ಕೈಬರಹದ ಪ್ರಶ್ನೆ ಪತ್ರಿಕೆ. ಆದರೆ ಮೂಲ ಪ್ರಶ್ನೆ ಪತ್ರಿಕೆಯಲ್ಲಿರುವ ಶೇ 70ರಷ್ಟು ಪ್ರಶ್ನೆಗಳು ಕೈಬರಹದ ಪ್ರಶ್ನೆ ಪತ್ರಿಕೆಯಲ್ಲಿ ತಾಳೆಯಾಗುತ್ತವೆ. ಹಾಗಾಗಿ ಗೊಂದಲ ಉಂಟಾಗಿದ್ದು, ಪರಿಶೀಲಿಸಿ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಮರು ಪರೀಕ್ಷೆ ಇಲ್ಲ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ನೀಡಿ, ದ್ವಿತೀಯ ಪಿಯು ಭೌತವಿಜ್ಞಾನ ಪ್ರಶ್ನೆಪತ್ರಿಕೆ ಬಯಲಾಗಿದೆ ಎಂಬುದರಲ್ಲಿ ಸತ್ಯಾಂಶವಿಲ್ಲ. ಆದ್ದರಿಂದ ಮರು ಪರೀಕ್ಷೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.