ಶನಿವಾರ, ಜೂನ್ 19, 2021
27 °C

ಪಿಯುಸಿ ಪ್ರಶ್ನೆ ಪತ್ರಿಕೆ ಬಹಿರಂಗ: ಐವರ ಆಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಐವರು ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಖಾಸಗಿ ಕಾಲೇಜುಗಳಿಗೆ ಮಾನ್ಯತೆ ರದ್ದುಪಡಿಸುವ ಸಂಬಂಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಶ್ನೆಪತ್ರಿಕೆ ಬಹಿರಂಗವಾದ ಹಿನ್ನೆಲೆಯಲ್ಲಿ ಈಗಾಗಲೇ 14 ಉಪನ್ಯಾಸಕರನ್ನು ಅಮಾನತುಗೊಳಿಸಿ, ನಾಲ್ಕು ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಇದರ ಮುಂದುವರಿದ ಭಾಗವಾಗಿ ಚಿಂತಾಮಣಿಯ ವಿಜಯ ಮತ್ತು ಕೋಲಾರದ ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿಗೂ ಶನಿವಾರ ನೋಟಿಸ್ ನೀಡಲಾಗಿದೆ.

ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತವಿಜ್ಞಾನ ಉಪನ್ಯಾಸಕ ಎನ್.ಮುನಿಕೃಷ್ಣಪ್ಪ, ಜೀವವಿಜ್ಞಾನ ಉಪನ್ಯಾಸಕ ಎ.ಮಂಜುನಾಥ್, ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಜೀವವಿಜ್ಞಾನ ವಿಷಯದ ಉಪನ್ಯಾಸಕರಾದ ಕೆ.ಎನ್.ಮಂಜುನಾಥ ರೆಡ್ಡಿ, ಶ್ರೀನಿವಾಸಪ್ಪ, ಚಿಂತಾಮಣಿಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಉಬೇದುಲ್ಲಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ರಶ್ಮಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.