ಪಿಯುಸಿ ವಾರ್ಷಿಕ ಪರೀಕ್ಷೆ: ನೋಂದಣಿಗೆ ಸೂಚನೆ

7

ಪಿಯುಸಿ ವಾರ್ಷಿಕ ಪರೀಕ್ಷೆ: ನೋಂದಣಿಗೆ ಸೂಚನೆ

Published:
Updated:

ಯಲಹಂಕ: ಮಾರ್ಚ್ ತಿಂಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೆಪ್ಪೆಂಬರ್ 1ರಿಂದ 30ರವರೆಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.ನಂತರ ದಿನಕ್ಕೆ 30 ರೂಪಾಯಿ ದಂಡಸಹಿತ ಶುಲ್ಕದಂತೆ ಅಕ್ಟೋಬರ್ 10ರವರೆಗೆ ನೋಂದಾಯಿಸಿಕೊಳ್ಳಲು ಕಾಲಾವಕಾಶವಿರುತ್ತದೆ. ಸಾಮಾನ್ಯ ವಿದ್ಯಾರ್ಥಿಗಳಿಗೆ 1,412 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1,160 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು 31.3.1997ಕ್ಕಿಂತ ಮುಂಚಿತವಾಗಿ ಜನಿಸಿರಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪನಿರ್ದೇಶಕ ಜಿ.ಎನ್.ಈಶ್ವರಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry