ಪಿಯು ಅತಿಥಿ ಉಪನ್ಯಾಸಕರ ಸಂಬಳ ಹೆಚ್ಚಿಸಿ

7

ಪಿಯು ಅತಿಥಿ ಉಪನ್ಯಾಸಕರ ಸಂಬಳ ಹೆಚ್ಚಿಸಿ

Published:
Updated:

ಹಲವು ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಕಂಡು ಬಂದಾಗ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೋಳ್ಳಲಾಗುತ್ತಿದೆ. ತಿಂಗಳಿಗೆ 5000 ರೂಪಾಯಿ ಸಂಬಳ ಪೂರ್ಣಕಾಲಿಕ ಉಪನ್ಯಾಸಕರಂತೆ ದುಡಿಸಿಕೊಳ್ಳಲಾಗುತ್ತಿತ್ತು.ಹಲವಾರು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿರಲಿಲ್ಲ. ಆದರೆ ನಿರಂತರ ಹೋರಾಟದ ಫಲವಾಗಿ ಉನ್ನತ ಶಿಕ್ಷಣ ಸಚಿವರು ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಬಳ ಏಪ್ರಿಲ್ ನಿಂದ ಜಾರಿಯಾಗುವಂತೆ ಹೆಚ್ಚಿಸಿದ್ದಾರೆ. ಅದರಂತೆ ಪಿಯು ಕಾಲೇಜುಗಳಲ್ಲಿಯು ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಇವರಿಗೆ ಯಾವುದೇ ಸೇವಾ ಪತ್ರ ನೀಡುವುದಿಲ್ಲ. ಆದರೂ ಇವರೆಲ್ಲ ಯಾವುದೇ ಸೇವಾ ಭದ್ರತೆ ಇಲ್ಲದೆ 4800 ರೂಪಾಯಿ ಸಂಬಳದಲ್ಲಿ ದುಡಿಯುತ್ತಿದ್ದಾರೆ.ಪದವಿ ಕಾಲೇಜು ಅತಿಥಿ ಉಪನ್ಯಾಸಕರಂತೆ ಇವರು ಕೂಡಾ ಕಾರ್ಯನಿರ್ವಸುತ್ತಿದ್ದಾರೆೆ. ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಪಿಯು ಕಾಲೇಜು ಅತಿಥಿ ಉಪನ್ಯಾಸಕರಿಗೂ ಸಂಬಳ ಹೆಚ್ಚಿಸುತ್ತೆವೆಯಂದು ಭರವಸೆ ನೀಡಿದ್ದರು. ಆ ಭರವಸೆ ಈಡೆರಿಸಲೆಂದು ಮನವಿ.   

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry