ಸೋಮವಾರ, ಜೂನ್ 14, 2021
27 °C

ಪಿಯು ಉಪನ್ಯಾಸಕರ ನೇಮಕ: ಬಿ.ಇಡಿ ಕಡ್ಡಾಯವಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ ಬಿ.ಇಡಿ ಕಡ್ಡಾಯಗೊಳಿಸಿದ್ದನ್ನು ರದ್ದುಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಉಪನ್ಯಾಸಕರ ನೇರ ನೇಮಕಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ರೂಪಿಸಿರುವ ವಿಶೇಷ ನೇಮಕಾತಿ ನಿಯಮಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆಯನ್ನು ಕಡ್ಡಾಯಗೊಳಿಸಲಾಗಿತ್ತು.  ಸ್ನಾತಕೋತ್ತರ ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದೆ ಇರುವುದರಿಂದ ಹಾಗೂ ಏಕಾಏಕಿ ಬಿ.ಇಡಿ ಕಡ್ಡಾಯ ಮಾಡಿರುವುದರಿಂದ ಸ್ನಾತಕೋತ್ತರ ಪದವೀಧರರಿಗೆ ಅನ್ಯಾಯವಾಗಲಿದೆ ಎಂದು `ಪ್ರಜಾವಾಣಿ~ ವಿಶೇಷ ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಬಿ.ಇಡಿ ವಿದ್ಯಾರ್ಹತೆಯನ್ನು  ಕೈಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

 

ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1765 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದಷ್ಟು ಬೇಗ ಅರ್ಜಿ ಆಹ್ವಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ `ಪ್ರಜಾವಾಣಿ~ಗೆ ತಿಳಿಸಿದರು.

ಕಲೆ, ವಿಜ್ಞಾನ, ವಾಣಿಜ್ಯ ಈ ಮೂರು ವಿಭಾಗಗಳ ಸ್ನಾತಕೋತ್ತರ ಪದವೀಧರರಿಗೂ ಈ ತಿದ್ದುಪಡಿ ಅನ್ವಯಿಸಲಿದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.