ರಾಮನಗರ: ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ತಿರುವು ಎಂದೇ ಪರಿಗಣಿಸಲಾಗಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ ತೆಗೆದುಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈ ವರ್ಷ ಗಣನೀಯವಾಗಿ ಕುಸಿದಿದೆ.

ವೃತ್ತಿ ಶಿಕ್ಷಣ ಕೋರ್ಸ್ಗಳಾದ ಎಂಜಿನಿಯರಿಂಗ್, ವೈದ್ಯಕೀಯ ಪದವಿ ಹಾಗೂ ಇತರ ಸಾಂಪ್ರದಾಯಿಕ ಪದವಿ ಕೋರ್ಸ್ಗಳ ಪ್ರವೇಶಕ್ಕೆ ದ್ವಿತೀಯ ಪಿ.ಯು ಪರೀಕ್ಷೆಯೇ ಮಾನದಂಡ. ಅದರೆ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಬೋಧಕ ವರ್ಗವನ್ನು ಚಿಂತೆಗೀಡು ಮಾಡಿದೆ.

ಸಾಮಾನ್ಯವಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದ ದ್ವಿತೀಯ ಪಿ.ಯು ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ಜಿಲ್ಲೆಯಲ್ಲಿ ಕುಸಿತ ಕಂಡಿದೆ. ಅದೂ ಹತ್ತಲ್ಲ, ಇಪ್ಪತ್ತಲ್ಲ... ಬರೋಬ್ಬರಿ 720 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ.

ಇದೇ 15ರಿಂದ ಆರಂಭವಾಗಲಿರುವ ದ್ವಿತೀಯ ಪಿ.ಯು ಪರೀಕ್ಷೆಯನ್ನು ಜಿಲ್ಲೆಯಲ್ಲಿ 9,112 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಿಲ್ಲೆಯಿಂದ 9, 832 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದರು.

ವಿಜ್ಞಾನ ವಿಭಾಗದಲ್ಲಿಯೇ ಹೆಚ್ಚಿನ ವಿದ್ಯಾರ್ಥಿಗಳ ಕುಸಿತ ಕಂಡು ಬಂದಿದೆ. ಕಳೆದ ವರ್ಷ 1,608 ವಿದ್ಯಾರ್ಥಿಗಳು ವಿಜ್ಞಾನವನ್ನು ಆಯ್ಕೆ ಮಾಡಿಕೊಂಡಿದ್ದರೆ, ಈ ವರ್ಷ 1, 270 ವಿದ್ಯಾರ್ಥಿಗಳು ವಿಜ್ಞಾನವನ್ನು ತೆಗೆದುಕೊಂಡಿದ್ದು, 338 ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ.

ಹೊಸಬರಲ್ಲೂ ಇಳಿಮುಖ:ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಳ್ಳುತ್ತಿರುವ ಹೊಸ ವಿದ್ಯಾರ್ಥಿಗಳ ಸಂಖ್ಯೆಯೂ ಇಳಿಮುಖವಾಗಿದೆ. ಕಳೆದ ವರ್ಷ 7,432 ಹೊಸ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರೆ ಈ ಬಾರಿ 6,856 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಂದರೆ 576 ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ.

ಬಡತನ, ಪೋಷಕರ ಮತ್ತು ವಿದ್ಯಾರ್ಥಿಗಳಲ್ಲಿನ ನಿರಾಸಕ್ತಿ, ಸೂಕ್ತ ಮಾರ್ಗದರ್ಶನದ ಕೊರತೆ, ಆರ್ಥಿಕ ನೆರವಿನಿಂದ ಕೆಲ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ನಂತರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಕೆಲವರು ಎಸ್ಸೆಸ್ಸೆಲ್ಸಿ ನಂತರ ಐಟಿಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಕೋರ್ಸ್ಗಳತ್ತ ಮುಖ ಮಾಡಿದ್ದಾರೆ.

ಮತ್ತೂ ಕೆಲವರು ಮುಂದಿನ ವ್ಯಾಸಂಗಕ್ಕೆ ಬೆಂಗಳೂರು, ಮಂಡ್ಯ, ಮೈಸೂರಿನತ್ತ ವಲಸೆ ಹೋಗಿದ್ದಾರೆ. ಈ ಕಾರಣಗಳಿಂದ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವಿದ್ಯಾರ್ಥಿಗಳು ಈ ವರ್ಷ ದ್ವಿತೀಯ ಪಿ.ಯು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಡಿಡಿಪಿಯು ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರೀಕ್ಷೆಗೆ ಸಿದ್ಧತೆ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆ ನಡೆಸಲು ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ. ಚಲುವಪ್ಪ `ಪ್ರಜಾವಾಣಿ~ಗೆತಿಳಿಸಿದರು.

ಈ ವರ್ಷ ಒಟ್ಟು 4, 673 ಬಾಲಕರು ಹಾಗೂ 4,439 ಬಾಲಕಿಯರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅದರಲ್ಲಿ 1,792 ಪುನರಾವರ್ತಿತ ಮತ್ತು 464 ಖಾಸಗಿ ವಿದ್ಯಾರ್ಥಿಗಳಾಗಿದ್ದು, 6, 856 ಹೊಸ ವಿದ್ಯಾರ್ಥಿಗಳಾಗಿದ್ದಾರೆ ಎಂದು ಅವರು ವಿವರಿಸಿದರು.

ರಾಮನಗರ ತಾಲ್ಲೂಕಿನಲ್ಲಿ 4 (ಬಿಡದಿಯಲ್ಲಿ 1), ಕನಕಪುರದಲ್ಲಿ 4, ಚನ್ನಪಟ್ಟಣದಲ್ಲಿ 3 ಮತ್ತು ಮಾಗಡಿಯಲ್ಲಿ 2 (ಕುದೂರಿನಲ್ಲಿ 1) ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 13 ಕೇಂದ್ರಗಳಲ್ಲಿ ಚನ್ನಪಟ್ಟಣದ ಸಾರ್ವಜನಿಕ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಿ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಅವರು ಹೇಳಿದರು.

ನಕಲು ತಡೆಗೆ ಕ್ರಮ: ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ `ಸಿಟ್ಟಿಂಗ್ ಸ್ಕ್ವಾಡ್~ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜಾಗೃತ ದಳ ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ, ಡಿಡಿಪಿಯು ನೇತೃತ್ವದಲ್ಲಿ ಜಾಗೃತ ದಳ ಇರುತ್ತದೆ ಎಂದು ಪ್ರತಿಕ್ರಿಯಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಡೆಸ್ಕ್ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಬೆಂಚ್ ಅಥವಾ ಡೆಸ್ಕ್ ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಬಾರದು. ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತುಕೊಂಡು ಪರೀಕ್ಷೆ ಬರೆಯಬಾರದು ಎಂದು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಸೂಕ್ತ ಬಂದೂಬಸ್ತ್ ಒದಗಿಸುವಂತೆ ಎಸ್ಪಿ ಅವರನ್ನು ಕೋರಲಾಗಿದೆ ಎಂದರು.

ಪರೀಕ್ಷಾ ವೇಳಾ ಪಟ್ಟಿ

ಇದೇ 15ರಿಂದ 31ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದೇ 15- ಇತಿಹಾಸ, ಕಂಪ್ಯೂಟರ್ ಸೈನ್ಸ್; 16- ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್; 17- ರಾಜ್ಯಶಾಸ್ತ್ರ, ಮೂಲ ಗಣಿತ; 18- ಭಾನುವಾರ- ರಜಾದಿನ; 19- ಅರ್ಥಶಾಸ್ತ್ರ, ಜಿಯೋಲಜಿ; 20- ಗಣಿತ, ಭೂಗೋಳಶಾಸ್ತ್ರ; 21- ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, 22- ಭೌತಶಾಸ್ತ್ರ, ಮನಃಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಸಂಗೀತ; 23- ಶುಕ್ರವಾರ- ಚಂದ್ರಮಾನ ಯುಗಾದಿ- ರಜಾದಿನ ; 24-ಐಚ್ಛಿಕ ಕನ್ನಡ, ಸಂಖ್ಯಾಶಾಸ್ತ್ರ, ಗೃಹ ವಿಜ್ಞಾನ; 25- ಭಾನುವಾರ- ರಜಾದಿನ; 26- ಇಂಗ್ಲಿಷ್; 27- ಲಾಜಿಕ್, ಶಿಕ್ಷಣ; 28- ರಸಾಯನ ವಿಜ್ಞಾನ, ವ್ಯವಹಾರ ಅಧ್ಯಯನ; 29- ಮರಾಠಿ, ಉರ್ದು, ಫ್ರೆಂಚ್, 30- ಕನ್ನಡ, ತಮಿಳು, ಮಲಯಾಳಂ, ಅರೇಬಿಕ್; 31- ಹಿಂದಿ, ತೆಲುಗು, ಸಂಸ್ಕೃತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.