ಗುರುವಾರ , ಮೇ 19, 2022
23 °C

ಪಿಯು ಪರೀಕ್ಷೆ 17ರಿಂದ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರದಿಂದ (ಮಾ.17) ಆರಂಭವಾಗಲಿದ್ದು, ಈ ವರ್ಷ ಒಟ್ಟು 6,24,265 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ರಾಜ್ಯದಲ್ಲಿನ 933 ಪರೀಕ್ಷಾ ಕೇಂದ್ರಗಳಲ್ಲಿ ಇದೇ 17ರಿಂದ 30ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಕಲು ಮಾಡುವುದನ್ನು ತಡೆಯುವ ದೃಷ್ಟಿಯಿಂದ ವಿಚಕ್ಷಣಾ ದಳ ರಚಿಸಲಾಗಿದೆ. ಅಲ್ಲದೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಂತಹ ಕಡೆ ಹೆಚ್ಚಿನ ನಿಗಾ ವಹಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.ಮೊಬೈಲ್ ಉಪಯೋಗಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ. ಕಳೆದ ವರ್ಷ 6,52,665 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರೆ ಈ ವರ್ಷ 6,24,265 ಮಂದಿ ಪರೀಕ್ಷೆ ಎದುರಿಸಲಿದ್ದಾರೆ. ಕಳೆದ ಬಾರಿಗಿಂತ ಈ ವರ್ಷ ಸುಮಾರು 28 ಸಾವಿರ ವಿದ್ಯಾರ್ಥಿಗಳು ಕಡಿಮೆಯಾಗಿದ್ದಾರೆ. ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆ ಈ ಸಲ 40 ಸಾವಿರ ಕಡಿಮೆಯಾಗಿರುವುದರಿಂದ ಒಟ್ಟಾರೆ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.ಹಿಂದೆ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಶುಲ್ಕ ಭರಿಸಲಾಗದೆ ಈ ಸಲ ಪರೀಕ್ಷೆ ತೆಗೆದುಕೊಳ್ಳದೆ ಇರಬಹುದು ಅಥವಾ ಶಿಕ್ಷಣವನ್ನು ಮೊಟಕುಗೊಳಿಸಿ ಯಾವುದಾದರೂ ಸಣ್ಣಪುಟ್ಟ ಉದ್ಯೋಗದಲ್ಲಿ ತೊಡಗಿರಬಹುದು. ಹೀಗಾಗಿ ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.