ಸೋಮವಾರ, ಮೇ 10, 2021
21 °C

ಪಿಯು ಪ್ರಶ್ನೆ ಪತ್ರಿಕೆ ಬಯಲು ಪ್ರಕರಣ: ಐವರು ಸಿಐಡಿ ಪೊಲೀಸರ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತರೀಕೆರೆ: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಐವರು ಆರೋಪಿಗಳನ್ನು ಸಿಐಡಿ ಪೊಲೀಸ್ ವಶಕ್ಕೆ ಮತ್ತು ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಸೋಮವಾರ ಆದೇಶಿಸಿತು.ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಬೆಂಗಳೂರಿನ ವೈಟ್‌ಫೀಲ್ಡ್‌ನ ಕಾಳಪ್ಪ ಅವರನ್ನು ಸೋಮವಾರ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಕದ್ದು ತಂದಿದ್ದ ಪ್ರಶ್ನೆ ಪತ್ರಿಕೆಯ ನಕಲು ಪ್ರತಿಯನ್ನು ಕಡೂರಿನ ಮುನಾವರ್ ಬಾಷಾ ಮನೆಯಲ್ಲಿ ಅಚ್ಚುಕಟ್ಟಾಗಿ ಬರೆದುಕೊಟ್ಟ ಆರೋಪ ಸೊಣ್ಣಪ್ಪನ ಸ್ನೇಹಿತನಾದ ಕಾಳಪ್ಪನ ಮೇಲೆ ಇದೆ ಎಂದು ಸಿಐಡಿ ಪೊಲೀಸರು ಹೇಳಿದ್ದಾರೆ.ಕಾಳಪ್ಪ, ಮುನಾವರ್ ಬಾಷಾ, ಸೊಣ್ಣಪ್ಪ, ಶಶಿಧರ್, ಮತ್ತು ರಮೇಶ್ ಅವರನ್ನು ಇದೇ 13ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿದ ನ್ಯಾಯಾಲಯ ಇತರ ಆರೋಪಿಗಳಾದ ರವಿಕುಮಾರ್, ಸುನೀಲ್ ಕುಮಾರ್, ಪ್ರಹ್ಲಾದ ಮತ್ತು ಅನಿಲ್ ರಾವತ್ ಅವರನ್ನು ಇದೇ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು. ಪ್ರಕರಣದ ಇತರ ಆರೋಪಿಗಳಾದ ನವೀನ್ ಕುಮಾರ್, ಅಜಯ್, ನಾರಾಯಣಗೌಡ, ಶಶಿಕಲಾ ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಿರುವುದಾಗಿ ಸಿಐಡಿ ಪೊಲೀಸರು ಪತ್ರಿಕೆಗೆ ತಿಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಶಿಕ್ಷಕ ಸಿದ್ದರಾಮಪ್ಪ ಮತ್ತು ವಕೀಲ ಯೋಗೀಶ್ವರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿಚಾರಣೆ ನಡೆಸಲು ಸಾಧ್ಯವಾಗುವಂತೆ ತನ್ನ ವಶಕ್ಕೆ ಪಡೆಯಲು ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಇವರ ವಿಚಾರಣೆ ಬಳಿಕ ಕೋಲಾರದ ಆಪಾದಿತರನ್ನು ವಶಕ್ಕೆ ಪಡೆಯುವುದಾಗಿ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.