ಗುರುವಾರ , ನವೆಂಬರ್ 21, 2019
23 °C

`ಪಿಯು ಮೌಲ್ಯಮಾಪನ ಬಹಿಷ್ಕಾರ ಇಲ್ಲ'

Published:
Updated:

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.ಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.ಈ ಕಾರಣ, ಸಂಘವು ಕರೆ ನೀಡಿದ್ದ ಮೌಲ್ಯಮಾಪನ ಬಹಿಷ್ಕಾರವನ್ನು ಹಿಂದಕ್ಕೆ ಪಡೆದಿದ್ದು, ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)