ಗುರುವಾರ , ಜುಲೈ 29, 2021
21 °C

ಪಿಯು ಶಿಕ್ಷಣದಲ್ಲಿ ಉನ್ನತ ಶಿಕ್ಷಣ ಮಾರ್ಗದರ್ಶನ ಪಠ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಪಠ್ಯಕ್ರಮದಲ್ಲಿ ಉನ್ನತ ಶಿಕ್ಷಣ ಮಾರ್ಗದರ್ಶನ ವಿಷಯವನ್ನು ಅಳವಡಿಸಲಾಗುವುದು ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.ಅಮೃತಾ ಇನ್ಸ್‌ಟಿಟ್ಯೂಟ್  ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಸೈನ್ಸ್ ಶನಿವಾರ ಹಮ್ಮಿಕೊಂಡಿದ್ದ ‘ಪಿಯುಸಿ ನಂತರ ಏನು?’ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ‘ಪಿಯುಸಿ ನಂತರ ಮುಂದಿನ ಶಿಕ್ಷಣದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿ ಉಂಟಾಗಬಹುದಾದ ಗೊಂದಲಗಳನ್ನು ನಿವಾರಿಸಲು ಎಲ್ಲ ಪಿಯುಸಿ ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಒಂದು ಗಂಟೆ ಕಾಲ ಉನ್ನತ ಶಿಕ್ಷಣ ಕುರಿತು ಮಾರ್ಗದರ್ಶನ ತರಗತಿಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಈ ಸಂಬಂಧ ಪದವಿ ಪೂರ್ವ ಮಂಡಳಿಯೊಂದಿಗೆ ಈಗಾಗಲೇ ಚರ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.‘ಎಂಜಿನಿಯರಿಂಗ್ ಕ್ಷೇತ್ರದ ಯಾವ ವಿಭಾಗದಲ್ಲಿ ಹೆಚ್ಚು ಬೇಡಿಕೆ ಇದೆ ಎಂಬುದರ ಕುರಿತು ತಜ್ಞರಿಂದ ಮಾಹಿತಿ ಪಡೆದು ನಂತರವೇ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.‘ಉದ್ಯೋಗ ಪಡೆಯುವುದೇ ಶಿಕ್ಷಣದ ಮುಖ್ಯ ಉದ್ದೇಶವಲ್ಲ. ಜೀವನವನ್ನು ಸಮರ್ಥವಾಗಿ ನಿಭಾಯಿಸುವಂತಹ ಶಿಕ್ಷಣ ನಮ್ಮದಾಗಬೇಕು. ಉತ್ತಮ ಶಿಕ್ಷಣ ಮತ್ತು ಉದ್ಯೋಗದಿಂದ ವೈಯಕ್ತಿಕ ಜೀವನದಲ್ಲಿ ಯಶಸ್ಸು ಗಳಿಸಬಹುದು. ಈ ನಿಟ್ಟಿನಲ್ಲಿ ಯುವಜನಾಂಗವು ಮುಂದುವರಿಯಬೇಕು’ ಎಂದು ಕಿವಿಮಾತು ಹೇಳಿದರು.ಕೆಪಿಐಟಿ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಟ್ರಸ್ಟಿ ತೇಜಸ್ವಿನಿ ಅನಂತಕುಮಾರ್ ಮಾತನಾಡಿ, ‘ಎಂಜಿನಿಯರ್ ವಿದ್ಯಾರ್ಥಿಗಳ ಆಸಕ್ತಿ ಅರಿತು, ಅವರಿಗೆ ಅಗತ್ಯವಿರುವ ಉದ್ಯೋಗ ಮಾಹಿತಿ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಲಾಗಿದ್ದು, ಈ ದಿಸೆಯಲ್ಲಿ ನುರಿತ ತಜ್ಞರ ತಂಡವು ಕಾರ್ಯನಿರತವಾಗಿದೆ’ ಎಂದು ಅವರು ನುಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.